ಮಂಡ್ಯ: ಕೌಟುಂಬಿಕ ದೌರ್ಜನ್ಯದಿಂದ ಪಾರು ಮಾಡಿ, ಪೊಲೀಸ್ ಠಾಣೆಗಳಲ್ಲಿ ಸರಿಯಾದ ಸ್ಪಂದನೆ ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಿ, ಮಕ್ಕಳ ಶಿಕ್ಷಣಕ್ಕೆ ಸೌಲಭ್ಯ ಕಲ್ಪಿಸಿ, ಮನೆ, ನಿವೇಶನ ಕೊಡಿಸಿ, ಶೌಚಾಲಯ ಸೌಲಭ್ಯ ಕಲ್ಪಿಸಿ...ಸೇರಿದಂತೆ ಜಿಲ್ಲೆಯ ವಿವಿಧಡೆ ಮತ್ತು ಅಕ್ಕಪಕ್ಕದ ಜಿಲ್ಲೆಗಳಿಂದ ಬಂದಿದ್ದ ಮಹಿಳೆಯರಿಂದ ವ್ಯಾಪಕ ದೂರು ಅರ್ಜಿಗಳು ಮಹಿಳಾ ಆಯೋಗಕ್ಕೆ ಸಲ್ಲಿಕೆಯಾದವು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ನಿರ್ದೇಶನದಂತೆ ಆಯೋಜಿಸಿದ್ದ ‘ಮಹಿಳಾ ಜನ್ ಸುನ್ವಾಯಿ’ (ಸಾರ್ವಜನಿಕ ವಿಚಾರಣೆ) ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಪ್ರತಿಯೊಬ್ಬರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ಕೊಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರಿ ಮಾಡುವ ಮಹಿಳೆಯೊಬ್ಬರು ಅನ್ಯಾಯವಾಗಿದೆ ಎಂದು ದೂರು ನೀಡಿದರು. 2 ಗಂಟೆಯಲ್ಲೇ ಸಮಸ್ಯೆ ಇತ್ಯರ್ಥಗೊಳಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡಿಸಿದರು. ಮತ್ತೆ ಕೆಲವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದವರಿಗೆ ತಾಕೀತು ಮಾಡಿದರು.

ನಾಗಲಕ್ಷ್ಮಿ ಚೌಧರಿ ಮಾತನಾಡಿ, ‘ಪೊಲೀಸ್ ಠಾಣೆಗೆ ದೂರು ನೀಡಲು ಬರುವ ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಅವರ ಸಮಸ್ಯೆಗಳನ್ನು ಆಲಿಸಿ, ಅವರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದು ಪೊಲೀಸರ ಕರ್ತವ್ಯ’ ಎಂದು ಹೇಳಿದರು.

ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ‘ಡಿಜಿಟಲ್ ಪೊಲೀಸ್ ಕ್ರಾಂತಿ’ ಕಾರ್ಯಕ್ರಮ ಮಾಡ ಬೇಕು. ಎಲ್ಲ ಪೊಲೀಸ್ ಠಾಣೆಗಳಲ್ಲಿ ಮಹಿಳೆಯರು ದೂರುಗಳನ್ನು ಸಲ್ಲಿಸಲು ಕ್ಯೂ.ಆರ್ ಕೋಡ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

‘ಮಹಿಳೆಯರಿಗೆ ತೊಂದರೆ ಯಾಗದಂತೆ ಲಿಂಗ ಸೂಕ್ಷ್ಮತೆ ಕಾರ್ಯಕ್ರಮಗಳನ್ನು ಮಾಡಬೇಕು. ಆಂತರಿಕ ದೂರು ಸಮಿತಿ ರಚನೆ ಬಗ್ಗೆ ಎಲ್ಲ ಶಾಲಾ ಮತ್ತು ಕಾಲೇಜುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕಾರ್ಯಕ್ರಮದ ಅರಿವು ಮೂಡಿಸಬೇಕು’ ಎಂದರು.

ಮಹಿಳಾ ಹಾಗೂ ಮಕ್ಕಳ ಭದ್ರತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ‘ಅಕ್ಕ ಪಡೆ’ ವಾಹನಗಳನ್ನು ಬಳಸಬೇಕು. ಶಾಲೆ- ಕಾಲೇಜು. ಪಾರ್ಕ್, ಆಸ್ಪತ್ರೆ, ಬಸ್ ನಿಲ್ದಾಣ ಇನ್ನಿತರ ಸ್ಥಳಗಳಲ್ಲಿ ಪರಿಶೀಲನೆ ನಡೆಸುವುದು ಅಗತ್ಯ. ಸಾರ್ವಜನಿಕ ಸ್ಥಳಗಳಲ್ಲಿ ‘ಸಹಾಯವಾಣಿ ಸಂಖ್ಯೆ’ಗಳನ್ನು ಗೋಚರಿಸುವಂತೆ ಅಳವಡಿಸಬೇಕು ಎಂದು ತಿಳಿಸಿದರು.

ಮಕ್ಕಳ ಪಾಲನಾ ಕೇಂದ್ರ: ಜಿಲ್ಲೆಯಲ್ಲಿ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಮಕ್ಕಳ ಪಾಲನಾ ಕೇಂದ್ರ ಸ್ಥಾಪಿಸಬೇಕು. ಶೌಚಾಲಯ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಹೆಣ್ಣು ಭ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹ ತಡೆಯುವಲ್ಲಿ ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗಿದೆ ಮತ್ತು ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಆಶಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-40-512302635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.