ಮಂಡ್ಯ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹುದ್ದೆಯ ಅಧಿಕಾರಾವಧಿ ಮುಕ್ತಾಯವಾಗಿರುವ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಇಂತಹ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಸಿ.ಅಶೋಕ್ ಅಧಿಕಾರ ಸ್ವೀಕಾರ ಮಾಡಿರುವುದು ಕಾನೂನು ಬಾಹಿರ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಧಿಯನ್ನು 5 ವರ್ಷದಿಂದ 30 ತಿಂಗಳಿಗೆ ಇಳಿಸಲಾಗಿದ್ದು ಇದರ ಬಗ್ಗೆ ಸರ್ಕಾರದ ನಿರ್ದೇಶನಗಳನ್ನು ನಿರೀಕ್ಷೆ ಮಾಡಲಾಗುತ್ತಿದೆ. ಸರ್ಕಾರದ ನಿರ್ದೇಶನ ಬರುವವರೆಗೂ ನಾಗರತ್ನಾ ಸ್ವಾಮಿ ಅವರು ಅಧ್ಯಕ್ಷೆಯಾಗಿ ಮುಂದುವರಿಯುತ್ತಾರೆ. ಸಿ.ಅಶೋಕ್ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವುದು ಅನೂರ್ಜಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ತಿದ್ದುಪಡಿ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಪಷ್ಟನೆ ನೀಡಿದ್ದು ಕಾಯ್ದೆಯ ತಿದ್ದುಪಡಿಗೂ ಮೊದಲು ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಅವಧಿ 5 ವರ್ಷಗಳವರೆಗೆ ನಿಗದಿ ಪಡಿಸಿರುವ ಕಾರಣ ಹೊಸ ಮೀಸಲಾತಿ ನಿಗದಿಗೆ ತಿದ್ದುಪಡಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಹೊಸ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ನೀಡಿರುವ ಸ್ಪಷ್ಟನೆ ಅನ್ವಯ ಕ್ರಮ ಕೈಗೊಳ್ಳಲು ಜಿಪಂ ಸಿಒಗೆ ಪತ್ರ ಬರೆಯಲಾಗಿತ್ತು. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಸಿ.ಅಶೋಕ್ ಏಕಾಏಕಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಮ್ಮ ಕಚೇರಿಯಿಂದ ಅಶೋಕ್ ಅವರಿಗೆ ಅಧ್ಯಕ್ಷರಾಗಲು ಯಾವುದೇ ಲಿಖಿತ ಆದೇಶ ನೀಡಿಲ್ಲ ಎಂದು ತಿಳಿಸಿದ್ದಾರೆ.

ಮುಂದುವರಿದ ಗೊಂದಲ: ಅಧ್ಯಕ್ಷೆ ಹಾಗೂ ಜೆಡಿಎಸ್ ಸದಸ್ಯರ ನಡುವಿನ ಅಧಿಕಾರದ ಲಾಲಸೆಯಿಂದಾಗಿ ಜಿಲ್ಲಾ ಪಂಚಾಯಿತಿ ಅಂಗಳದಲ್ಲಿ ಗೊಂದಲ ಮುಂದುವರಿದಿದೆ. ಕಳೆದ 2 ವರ್ಷಗಳಿಂದ ಅಧಿಕಾರದಲ್ಲಿರುವ ಅಧ್ಯಕ್ಷೆ ನಾಗರತ್ನಾ ಸ್ವಾಮಿ ಒಂದು ಸಾಮಾನ್ಯ ಸಭೆ ನಡೆಸಲು ಸಾಧ್ಯವಾಗಿಲ್ಲ, ಅನುದಾನ ವಾಪಸ್ ಹೋಗುವ ಅಪಾಯ ಎದುರಾಗಿದ್ದರೂ 2020–21ನೇ ಸಾಲಿನ ಬಜೆಟ್ ಮಂಡನೆ ಮಾಡಲು ಸಾಧ್ಯವಾಗಿಲ್ಲ.

ಇದೇ ರೀತಿ, ಜೆಡಿಎಸ್ ಸದಸ್ಯರು ಅಧ್ಯಕ್ಷೆಗೆ ಅಸಹಕಾರ ತೋರಿಸುತ್ತಲೇ ಇದ್ದು ಉದ್ದೇಶಪೂರ್ವಕವಾಗಿ ಸಾಮಾನ್ಯ ಸಭೆಗೆ ಗೈರುಹಾಜರಾಗುತ್ತಿದ್ದಾರೆ ಜಿಲ್ಲಾ ಪಂಚಾಯಿತಿ ಕಚೇರಿಗೆ ಬಂದರೂ ಸಾಮಾನ್ಯ ಸಭೆಗೆ ಬರುತ್ತಿಲ್ಲ. ಇದರ ಮುಂದುವರಿದ ಭಾಗವಾಗಿ ಅಧ್ಯಕ್ಷೆ ಹುದ್ದೆ ಖಾಲಿ ಇಲ್ಲದಿದ್ದರೂ ಸಿ.ಅಶೋಕ್ ಅಧಿಕಾರ ಸ್ವೀಕಾರ ಮಾಡಿರುವುದು ಗೊಂದಲ ಮೂಡಿಸಿದೆ.

ಅಧಿಕಾರ ಸ್ವೀಕಾರ ನಂತರ ಜೆಡಿಎಸ್ ಸದಸ್ಯರು ಅಶೋಕ್ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಆದರೆ ಕೆಲವೇ ಹೊತ್ತಿನಲ್ಲಿ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ ಕಾರಣ ಪರಿಸ್ಥಿತಿ ಬದಲಾಯಿತು.

ಅತಿಕ್ರಮ ಪ್ರವೇಶ: ಎಸ್ಪಿಗೆ ದೂರು

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ಸಿ.ಅಶೋಕ್ ಅಧ್ಯಕ್ಷೆ ಕೊಠಡಿಗೆ ಅತಿಕ್ರಮ ಪ್ರವೇಶ ಮಾಡಿ, ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತಿ ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷೆ ನಾಗರತ್ನಾ ಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಸಿದರು.

ಅಧ್ಯಕ್ಷರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವ ಸಿ.ಅಶೋಕ್ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಕಾಯ್ದೆಗಿಂತ ಪತ್ರ ದೊಡ್ಡದೇ?: ಅಶೋಕ್

‘ಪಂಚಾಯತ್ ರಾಜ್ ಕಾಯ್ದೆಯನ್ವಯ ಅಧ್ಯಕ್ಷರ ಅವಧಿ ಸೆ.22ರಂದೇ ಮುಕ್ತಾಯಗೊಂಡಿದೆ. ನಾನು ಅಧ್ಯಕ್ಷರ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿಲ್ಲ, ಅವರೇ ಅನಧಿಕೃತವಾಗಿ ಅಧಿಕಾರದಲ್ಲಿ ಅವರು ಮುಂದುವರಿಯುತ್ತಿದ್ದಾರೆ. ಅಧಿಕಾರಿಗಳು ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಅಧ್ಯಕ್ಷರನ್ನು ಮುಂದುವರಿಸುತ್ತಿದ್ದಾರೆ’ ಎಂದು ಸಿ.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

‘ಆರ್ಡಿಪಿಆರ್ ಪ್ರಧಾನ ಕಾರ್ಯದರ್ಶಿಗಳು ನೀಡಿರುವ ಸ್ಪಷ್ಟನೆ ಸಣ್ಣತನದಿಂದ ಕೂಡಿದೆ. ತಿದ್ದುಪಡಿ ಕಾಯ್ದೆಗಿಂತ ಇವರು ನೀಡಿರುವ ಪತ್ರವೇ ದೊಡ್ಡದೇ? ನನಗೆ ವೈಯಕ್ತಿಕವಾಗಿ ಅಧ್ಯಕ್ಷರಾಗುವ ಇರಾದೆ ಇಲ್ಲ. ಆದರೆ ಕಾನೂನಿಗೆ ಅನುಗುಣವಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಪಕ್ಷದ ವರಿಷ್ಠರ ಜೊತೆ ತೀರ್ಮಾನಿಸಿ ಸರ್ಕಾರ ನೀಡಿರುವ ಸ್ಪಷ್ಟನೆ ವಿರುದ್ಧ ಕೋರ್ಟ್ನಲ್ಲಿ ಪ್ರಕರಣ ದಾಖಲು ಮಾಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.