ಮಂಡ್ಯ: ‘ಮಾರ್ಚ್ 15ರೊಳಗೆ ತೆರಿಗೆ ವಸೂಲಾತಿಯಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತೆರಿಗೆ ವಸೂಲಾತಿಗೆ ಸಂಬಂಧಿಸಿದಂತೆ ತಾಲ್ಲೂಕುವಾರು ಗುರಿ ನಿಗದಿಪಡಿಸಿದ್ದು ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುವಂತೆ ಎಚ್ಚರಿಕೆ ನೀಡಿದರು.

ಶೇ 100ರಷ್ಟು ತೆರಿಗೆ ವಸೂಲಾತಿ ಮಾಡಿರುವ ಪಾಂಡವಪುರ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಬಾಕಿ ನೀಡಬೇಕಾಗಿರುವ ವೇತನವನ್ನು 15 ದಿನಗಳ ಒಳಗಾಗಿ ಪಾವತಿಸುವಂತೆ ಸೂಚಿಸಿದರು. ತಂತ್ರಾಂಶದಲ್ಲಿ ಬಾಕಿ ಇರುವ ವೇತನ ಪಾವತಿ ಬಗ್ಗೆ ತಾಲ್ಲೂಕು ಪಂಚಾಯಿತಿಯಿಂದ ಸೂಕ್ತ ಸಮಜಾಯಿಷಿಯೊಂದಿಗೆ ದೃಢೀಕರಣ ಸಲ್ಲಿಸಲು ತಿಳಿಸಿದರು.

ಕೊಳವೆಬಾವಿ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಕೆ.ಆರ್ ಪೇಟೆ, ಮಳವಳ್ಳಿ, ಪಾಂಡವಪುರ, ಮಂಡ್ಯ, ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯಿತಿರವರಿಗೆ ಅಭಿನಂದನೆ ಸಲ್ಲಿಸಿದರು.

ಸಭೆಯಲ್ಲಿ ಉಪಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಲೆಕ್ಕಾಧಿಕಾರಿಗಳಾದ ಜ್ಯೋತಿ, ಸಹಾಯಕ ಕಾರ್ಯದರ್ಶಿ(ಆಡಳಿತ) ರವೀಂದ್ರ, ಸಹಾಯಕ ಯೋಜನಾಧಿಕಾರಿ (ಡಿ.ಆರ್.ಡಿ.ಎ) ಶ್ರೀಹರ್ಷ ಹಾಗೂ ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

‘ನರೇಗಾ ಕೂಲಿಕಾರರಿಗೆ ಇ–ಕೆವೈಸಿ ಕಡ್ಡಾಯ’

ನರೇಗಾ ಯೋಜನೆಯ ಕೂಲಿಕಾರರಿಗೆ ಇ-ಕೆವೈಸಿ ಕಡ್ಡಾಯವಾಗಿದ್ದು ತಾಂತ್ರಿಕ ಸಮಸ್ಯೆ ಇರುವ ಫಲಾನುಭವಿಗಳ ವಿವರವನ್ನು ಸಂಬಂಧಪಟ್ಟ ಅಧಿಕಾರಿರರಿಗೆ ಗಮನಕ್ಕೆ ತಂದು ಇ ಕೆವೈಸಿ ಪೂರ್ಣಗೊಳಿಸಲು ಸಿಇಒ ನಂದಿನಿ ತಿಳಿಸಿದರು. ವೈಯಕ್ತಿಕ ಗೃಹ ಶೌಚಾಲಯಗಳ ಬಾಕಿ ಇರುವ ಜಿಯೋ ಟ್ಯಾಗ್ ಗಳನ್ನು ಪೂರ್ಣಗೊಳಿಸುವುದು ಹಾಗೂ ಪ್ರೋತ್ಸಾಹ ಧನ ಪಾವತಿಸಲು ಕ್ರಮವಹಿಸುವುದು. ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಸಂಬಂಧಿಸಿದಂತೆ ಪ್ರಸ್ತಾವವನ್ನು ನಾಳೆಯೊಳಗೆ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.