ಶ್ರೀರಂಗಪಟ್ಟಣ: ತಾಲ್ಲೂಕಿನ ಆಲದಹಳ್ಳಿ ಗ್ರಾಮದ ರಂಗಭೂಮಿ ಕಲಾವಿದೆ ಹಾಗೂ ಜಾನಪದ ಹಾಡುಗಳ ಗಾಯಕಿ ಮಂಜುಳಾ ಆಲದಹಳ್ಳಿ ಅವರನ್ನು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಿದೆ.

ಮಾ.8ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜುಳಾ ಆಲದಹಳ್ಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರುಣೋದಯ ಕಲಾ ಸಂಘದ ಅಧ್ಯಕ್ಷೆ ಮಂಜುಳಾ ಆಲದಹಳ್ಳಿ ಅವರು ಕಳೆದ ಮೂರು ದಶಕಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೀದಿ ನಾಟಕಗಳ ಮೂಲಕ ಸರ್ಕಾರದ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಜಾನಪದ ಹಾಡುಗಾರ್ತಿಯಾಗಿರುವ ಮಂಜುಳಾ ಮೂಢನಂಬಿಕೆಗಳ ದುಷ್ಪರಿಣಾಮಗಳು ಮತ್ತು ಸಾಕ್ಷರತೆಯ ಮಹತ್ವ ಸಾರಿದ್ದಾರೆ. ಸ್ವಗ್ರಾಮ ಆಲದಹಳ್ಳಿಯಲ್ಲಿ ಮುಚ್ಚಿ ಹೋಗಿದ್ದ ಸರ್ಕಾರಿ ಶಾಲೆ ಪುನರಾರಂಭಕ್ಕೆ ಕಾರಣ ಕರ್ತರಾಗಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನರಾಗಿರುವ ಮಂಜುಳಾ ಆಲದಹಳ್ಳಿ ಅವರನ್ನು ಶಾಸಕ ರಮೇಶ ಬಂಡಿಸಿದ್ದೇಗೌಡ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗು, ಗ್ರಂಥಾಲಯ ಮೇಲ್ವಿಚಾರಕ ಸಂಘದ ಅಧ್ಯಕ್ಷ ಕೂಡಲಕುಪ್ಪೆ ಸೋಮಶೇಖರ್, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹುರುಗಲವಾಡಿ ರಾಮಯ್ಯ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.