ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ನಿಯಮ ಉಲ್ಲಂಘಿಸಿ ಮದುವೆ: ಪ್ರಕರಣ ದಾಖಲು

Last Updated 24 ಮೇ 2021, 5:50 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಬಳಿ ಕೋವಿಡ್‌ ನಿಯಮ ಉಲ್ಲಂಘಿಸಿ ಮದುವೆ ನಡೆಸುತ್ತಿದ್ದ ಸ್ಥಳದ ಮೇಲೆ ಭಾನುವಾರ ರಾತ್ರಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ನಿಯಮಾನುಸಾರ ಮದುವೆಗೆ ತಹಶೀಲ್ದಾರ್‌ ಅವರ ಅನುಮತಿ ಪಡೆಯಬೇಕಾಗಿತ್ತು. ಯಾವುದೇ ಅನುಮತಿ ಪಡೆಯದೇ 300ಕ್ಕೂ ಹೆಚ್ಚು ಜನರನ್ನು ಸೇರಿಸಿ ಮದುವೆ ನಡೆಸಲಾಗುತ್ತಿತ್ತು. ಸೂಕ್ತ ಮಾಹಿತಿ ಆಧರಿಸಿ ತಹಶೀಲ್ದಾರ್ ಚಂದ್ರಶೇಖರ್ ಶಂ ಗಾಳಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿತು. ಘಟನೆ ಸಂಬಂಧ 3 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಪರಿಶೀಲನೆ ವೇಳೆ ಆಯೋಜಕರು ಅಧಿಕಾರಿಗಳ ವಿರುದ್ಧ ಅಸಭ್ಯವಾಗಿ ವರ್ತಿಸಿದ್ದಾರೆ. ಅಧಿಕಾರಿಗಳನ್ನು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದ್ದು 10ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಮದುವೆ ಮನೆಗೆ ಅನಧಿಕೃತವಾಗಿ ವಿದ್ಯುತ್‌ ಪೂರೈಸಿದ್ದ ಸೆಸ್ಕ್‌ ಎಂಜಿನಿಯರ್‌ ಮೇಲೂ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT