ಮೀನು ಸಾಕಾಣಿಕೆ; ತಾಂತ್ರಿಕ ತರಬೇತಿ
ತಾ.ಪಂ. ಇಒ ರಾಮಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಣ್ಣ ಕೆರೆ-ಕಟ್ಟೆ ಕೊಳಗಳಲ್ಲಿ ಮೀನು ಮರಿ ಸಾಕಾಣಿಕೆ ಮಾಡಲು ಮತ್ಸ್ಯ ಸಂಜೀವಿನಿ ಯೋಜನೆ ಅಡಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಈ ಸಂಬಂಧ ತಾಂತ್ರಿಕ ತರಬೇತಿಯನ್ನು ಕೂಡ ಮಹಿಳೆಯರಿಗೆ ನೀಡಲಾಗಿದೆ. ಮದ್ದೂರು ತಾಲ್ಲೂಕಿನಲ್ಲಿ ಮತ್ಯ್ಸ ಸಂಜೀವಿನಿ ಯೋಜನೆ ಅಡಿ 5 ಸಣ್ಣ ಕೆರೆ ಕಟ್ಟೆಗಳಲ್ಲಿ ಮೀನು ಸಾಕಾಣಿಕೆ ಮಾಡಲು ಆದ್ಯತೆ ನೀಡಲಾಗಿದೆ ಎಂದರು.