ಮಳವಳ್ಳಿ: ನಾಡಪ್ರಭು ಕೆಂಪೇಗೌಡ ಅವರ ದೂರ ದೃಷ್ಟಿಯ ಫಲವಾಗಿ ಪ್ರಸ್ತುತ ಬೆಂಗಳೂರಿನಲ್ಲಿ ಸರ್ವ ಜನಾಂಗವೂ ಜೀವನ ನಡೆಸುವಂತಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಕೆಂಪೇಗೌಡರ ಜಯಂತಿ ಅಂಗವಾಗಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೆಂಪೇಗೌಡರ ಚಿಂತನೆಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ಉದ್ಘಾಟಿಸಿ ಮಾತನಾಡಿದರು. ತಹಶೀಲ್ದಾರ್ ಎಸ್.ವಿ.ಲೊಕೇಶ್ ಅಧ್ಯಕ್ಷತೆ ವಹಿಸಿದ್ದರು. ಶಾಂತಿ ಕಾಲೇಜಿನ ಪ್ರಾಂಶುಪಾಲೆ ಅನಿತಾ ಕೆಂಪೇಗೌಡರ ಜೀವನ ಚರಿತ್ರೆ ಬಗ್ಗೆ ಉಪನ್ಯಾಸ ನೀಡಿದರು. ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಪಿ.ನಾಗೇಶ್ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ತಾ.ಪಂ.ಇಒ ಎಚ್.ಜಿ.ಶ್ರೀನಿವಾಸ್, ಮನ್ ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಡಿ.ಕೃಷ್ಣೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಲಿಂಗಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮಾದೇಶ್, ಪುರಸಭೆ ಉಪಾಧ್ಯಕ್ಷ ಎನ್.ಬಸವರಾಜು, ಸದಸ್ಯರಾದ ಸಿದ್ದರಾಜು, ಬಸವರಾಜು, ನೂರುಲ್ಲಾ, ಎಂ.ಟಿ.ಪ್ರಶಾಂತ್, ಬಸವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.