ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲುಕೋಟೆಯಲ್ಲಿ ಸರಳ ವೈರಮುಡಿ ಉತ್ಸವ: ತಿರುವಾಭರಣ ಪೆಟ್ಟಿಗೆಗೆ ಪೂಜೆ

Last Updated 24 ಮಾರ್ಚ್ 2021, 3:46 IST
ಅಕ್ಷರ ಗಾತ್ರ

ಮಂಡ್ಯ: ಇಂದು ಮೇಲುಕೋಟೆಯಲ್ಲಿ ಸರಳ ವೈರಮುಡಿ ಉತ್ಸವ ನಡೆಯಲಿದ್ದು, ಅದಕ್ಕೂ ಮುನ್ನ ತಿರುವಾಭರಣ ಪೆಟ್ಟಿಗೆಗೆ ಮಂಡ್ಯದ ಲಕ್ಷ್ಮಿಜನಾರ್ಧನ ದೇವಾಲಯದಲ್ಲಿ ಪೂಜೆ ನೆರವೇರಿಸಲಾಯಿತು.

ಜಿಲ್ಲಾ ಖಜಾನೆಯಲ್ಲಿದ್ದ ಪೆಟ್ಟಿಗೆಯನ್ನು ಮೆರವಣಿಗೆ ಮೂಲಕ ಮೇಲುಕೋಟಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗದಲ್ಲಿ ಸಿಗುವ ವೈರಮುಡಿ ಮಂಟಪಗಳಲ್ಲಿ ಪೆಟ್ಟಿಗೆ ಇಟ್ಟು ಪೂಜೆ ಸಲ್ಲಿಸಲಾಗುತ್ತದೆ.

ಸ್ಥಳೀಯ ಗ್ರಾಮಸ್ಥರು ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಬಿಗಿ ಪೊಲೀಸ್ ಭದ್ರತೆ ನಡುವೆ ವಜ್ರಖಚಿತ ಕಿರೀಟದ ಆಭರಣ ಪೆಟ್ಟಿಗೆ ಕೊಂಡೊಯ್ಯಲಾಗುತ್ತಿದೆ.

ಸಂಜೆ ಮೇಲುಕೋಟೆ ತಲುಪಿದ ನಂತರ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ತಿರುವಾಭರಣ ಪೆಟ್ಟಿಗೆ ತೆರೆದು ಕಿರೀಟ ಸಿದ್ಧಗೊಳಿಸಿ ಚೆಲುವನಾರಾಯಣಸ್ವಾಮಿ ಉತ್ಸವ ಮೂರ್ತಿಗೆ ತೊಡಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT