ಮೇಲುಕೋಟೆ : ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣವೇ ಶಕ್ತಿ ಎಂದಿದ್ದರು. ಒಂದು ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಮಹತ್ವದ ಪಾತ್ರ ಇರುತ್ತದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಹೋಬಳಿ ಮಹದೇಶ್ವರಪುರ ಗ್ರಾಮದ ಬಳಿ ತಾಲ್ಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ₹22 ಕೋಟಿ ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಪರಿಸರವೂ ಸುಂದರವಾಗಿರಬೇಕು. ಗುಣಮಟ್ಟದ ಕಟ್ಟಡ ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣವಾಗಬೇಕು. ಗುತ್ತಿಗೆದಾರರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಅಂಬೇಡ್ಕರ್ ಅವರ ಜಯಂತಿಯಂದು ವಸತಿ ಶಾಲೆಯನ್ನು ಉದ್ಘಾಟಿಸಲಾಗುವುದು ಎಂದು ಭರವಸೆ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ದೇವಸ್ಥಾನಕ್ಕೆ ಸೇರಿದ್ದ ಕಟ್ಟಡದಲ್ಲಿ ನಡೆಯುತ್ತಿದೆ. ಸರ್ಕಾರದ ಅನುದಾನದಿಂದ ಕಟ್ಟಡ ನಿರ್ಮಿಸಲಾಗುತ್ತಿದೆ. ಇದಕ್ಕೆ ಹಲ ಎಂದರು.

ವಸತಿ ಶಾಲೆ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ ಎಸ್.ನಿಂಗರಾಜು ಮಾತನಾಡಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರಯತ್ನದಿಂದ ₹22 ಕೋಟಿಯ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ. ಐದು ಎಕರೆ ವಿಸ್ತೀರ್ಣದ ಜಾಗದಲ್ಲಿ 5513 ಚದರ ವಿಸ್ತೀರ್ಣದ 6 ಕಟ್ಟಡ ನಿರ್ಮಿಸಲಾಗುತ್ತಿದೆ. ಇದರಲ್ಲಿ ಪ್ರತಿಯೊಂದು ಶಾಲಾ ಸಂಕೀರ್ಣ, ಸಂಗ್ರಾಹಲಯ, ರಂಗಮಂದಿರ ಸೌಕರ್ಯಗಳು ಇರಲಿದೆ ಎಂದು ತಿಳಿಸಿದರು. ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೂರರಷ್ಟು ಫಲಿತಾಂಶ ಬಂದಿದೆ. ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕರು ಸಂಘಟಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 18 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರೈತಸಂಘ ತಾಲ್ಲೂಕು ಅಧ್ಯಕ್ಷ ವೈ.ಪಿ.ಮಂಜು, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಜೆ.ಕೋಮಲ, ಚಂದ್ರಶೇಖರ್, ರವಿಕುಮಾರ್, ರತ್ನ, ಅಧ್ಯಕ್ಷರಾದ ಜಗದೀಶ್, ಚಂದ್ರಶೇಖರ್, ಶಿಕ್ಷಕಿ ರೇಖಾ, ಶೃತಿ ಪಾಲ್ಗೊಂಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-797473545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.