ಶನಿವಾರ, ಸೆಪ್ಟೆಂಬರ್ 18, 2021
26 °C

ಮೇಲುಕೋಟೆ: ವಾಹನೋತ್ಸವ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೇಲುಕೋಟೆ: ಇಲ್ಲಿನ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಭಾನುವಾರ ಮತ್ತು ಸೋಮವಾರ ಮಹಾನವಮಿ ಮತ್ತು ವಿಜಯದಶಮಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಲಿವೆ.

ಭಾನುವಾರ ಆಯುಧಪೂಜೆ, ಸೋಮವಾರ ಚೆಲುವನಾರಾಯಣ ಸ್ವಾಮಿಗೆ ಮಹಾರಾಜರ ಅಲಂಕಾರ ಮಾಡಲಾಗುತ್ತದೆ. ಸಂಜೆ ಉತ್ಸವಮೂರ್ತಿಗೆ  ಯುವರಾಜನ ಅಲಂಕಾರದೊಂದಿಗೆ ವಾಹನೋತ್ಸವ ಮತ್ತು ಬನ್ನಿಪೂಜೆ ನೆರವೇರುತ್ತದೆ. ನಂತರ ಕಲ್ಯಾಣನಾಯಕಿ ಅಮ್ಮನವರೊಂದಿಗೆ ವಿಜಯೋತ್ಸವ ಮೆರವಣಿಗೆ ನಡೆಲಿದೆ.

ಗಮನಸೆಳೆದ ಪಲ್ಲಕ್ಕಿ ಉತ್ಸವ: ಶನಿವಾರ ದೇವಾಲಯದ ಹೊರ ಪ್ರಾಕಾರದಲ್ಲಿ ಕಲ್ಯಾಣನಾಯಕಿ ಅಮ್ಮನವರ ದಂತದ ಪಲ್ಲಕ್ಕಿ ಉತ್ಸವ ನೆರವೇರಿತು. ವೇದಾಂತ ದೇಶಿಕರ ಸನ್ನಿಧಿಯಲ್ಲಿರುವ ನವರಾತ್ರಿ ಮಂಟಪದಲ್ಲಿ ದೇವಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಪುಳ್ಳೈ ಲೋಕಾಚಾರ್ಯರ ತಿರು ನಕ್ಷತ್ರ ಮಹೋತ್ಸವ ಸಡಗರ ಸಂಭ್ರಮದೊಂದಿಗೆ ನೆರವೇರಿತು.

ಮೆರವಣಿಗೆಯಲ್ಲಿ ಪವಿತ್ರ ತೀರ್ಥ ತಂದು ಆಚಾರ್ಯರಿಗೆ ಮಹಾಭಿಷೇಕ ನೆರವೇರಿಸಲಾಯಿತು. ನಂತರ ಮಹಾ ಮಂಗಳಾರತಿ ಮಾಡಲಾಯಿತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು