ಮಂಡ್ಯ: ಜಿಲ್ಲಾ ಪಂಚಾಯಿತಿ ವತಿಯಿಂದ ‘ಸಖಿ ಸುರಕ್ಷಾ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ ಮುಟ್ಟಿನ ಕಪ್ ವಿತರಣೆ ಮಾಡುವ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 10 ಜನ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಮುಟ್ಟಿನ ಕಪ್ ಗಳನ್ನು ವಿತರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹಕಾರದಿಂದ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ಅನುದಾನದಡಿ 2,200 ಮುಟ್ಟಿನ ಕಪ್ ದೊರೆತಿವೆ. ತಜ್ಞ ವೈದ್ಯರ ಸಲಹೆಯಂತೆ ಪ್ರಾಥಮಿಕ ಹಂತದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮುಟ್ಟಿನ ಕಪ್ ಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ತಿಳಿಸಿದರು.

ಜಿಲ್ಲೆಯ ಎಲ್ಲ 7 ತಾಲ್ಲೂಕುಗಳಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಟ್ಟಿನ ಕಪ್ ವಿತರಣೆಗೆ ಸಾಂಕೇತಿಕವಾಗಿ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರು ಚಾಲನೆ ನೀಡಿದರು.

ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಜಿಲ್ಲೆಯ ಎಲ್ಲ 25ರಿಂದ 45 ವರ್ಷದ ಮಹಿಳೆಯರಿಗೆ ಸಿ.ಎಸ್.ಆರ್. ಅನುದಾನದಲ್ಲಿ ಮುಟ್ಟಿನ ಕಪ್ ಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ.ಆರ್. ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.