ಮದ್ದೂರು: ‘ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಅಡುಗೆ ಸಿಬ್ಬಂದಿ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಪ್ರಯತ್ನ ಪಡುತ್ತೇನೆ’ ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ನಡೆದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಧ್ಯಾಹ್ನದ ಬಿಸಿಯೂಟದ ಮುಖ್ಯ ಹಾಗೂ ಸಹಾಯಕ ಅಡುಗೆ ಸಿಬ್ಬಂದಿಗೆ ನಡೆದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸಿಗುವ ಇತರೆ ಸೌಲಭ್ಯಗಳನ್ನು ಸಿಗುವ ಹಾಗೆ ನೋಡಿಕೊಳ್ಳಲಾಗುವುದು. ಕದಲೂರು ಉದಯ್ ಟ್ರಸ್ಟ್ ವತಿಯಿಂದಲೂ ಅಗತ್ಯ ಸಹಕಾರಗಳನ್ನು ಹಿಂದೆಯೂ ನೀಡಿದ್ದು, ಮುಂದೆಯೂ ಅಗತ್ಯ ನೆರವು ಒದಗಿಸಲಾಗುವುದು ಎಂದು ತಿಳಿಸಿದರು.

ಜಿ.ಪಂ ಸಿಇಒ ನಂದಿನಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಪೋಷಕ ಆಹಾರಗಳು ಸಿಗುವ ಉದ್ದೇಶದಿಂದ ಸರ್ಕಾರ ‘ನಮ್ಮ ನಡಿಗೆ ಸರ್ಕಾರಿ ಶಾಲೆಯ ಅಡುಗೆ ಮನೆಯ ಕಡೆಗೆ’ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಡುಗೆ ಸಿಬ್ಬಂದಿಗೆ ಹಲವು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಆದ್ದರಿಂದಲೇ ಅಗ್ನಿ ಶಾಮಕ ಸಿಬ್ಬಂದಿಯಿಂದ ಹಲವು ತರಬೇತಿ ನೀಡಲಾಗುತ್ತಿದೆ ಎಂದರು.

ಮನವಿ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ದೇವರಾಜು ಅವರು, ಬಿಸಿಯೂಟದಲ್ಲಿ ನೀಡಲಾಗುತ್ತಿರುವ ಮೊಟ್ಟೆ ದರ ಹೆಚ್ಚಾಗಿರುವುದರಿಂದ ಹೆಚ್ಚುವರಿ ಹಣವನ್ನು ಸರ್ಕಾರದಿಂದ ಕೊಡಿಸಬೇಕೆಂದು ಸ್ಥಳದಲ್ಲಿಯೇ ಶಾಸಕ ಕೆ.ಎಂ.ಉದಯ್ ಅವರಿಗೆ ಮನವಿ ಪತ್ರ ನೀಡಿದರು.

ಕಾರ್ಯಕ್ರಮದಲ್ಲಿ ತಾ.ಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಮುಖ್ಯ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನಂತೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ದೇವರಾಜು, ಪ್ರಾಢಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಶ್, ಕ್ಷೇತ್ರ ಸಮನ್ವಯಧಿಕಾರಿ ನಾಗೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.