ಮಂಡ್ಯ: ‘ಇಲ್ಲಿಯ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಮೇಲ್ದರ್ಜೆಗೇರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ನಡೆದ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ಧಿ ಕುರಿತು ವಿಸ್ತೃತ ಚರ್ಚೆ ನಡೆಸಿದ ನಂತರ ಉಭಯ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಎಲ್ಲಾ ರೀತಿಯ ಅಗತ್ಯ ನೆರವು ನೀಡುವ ಭರವಸೆ ನೀಡಿದರು.

ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ 800ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ. ಇದೇ ರೀತಿ ವಿದ್ಯಾರ್ಥಿಗಳ ಸಂಖ್ಯೆಯನ್ನು 200ರಿಂದ 250ಕ್ಕೆ ಹೆಚ್ಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವರು, ಪರಿಸರ ಇಲಾಖೆ ಪರವಾನಗಿ ನವೀಕರಿಸಿ ಮೇಲ್ದರ್ಜೆಗೆರಿಸಲು ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಇದೇ ರೀತಿ ತುರ್ತು ಚಿಕಿತ್ಸಾ ಘಟಕ ಹಾಗೂ ಲಘು ಶಸ್ತ್ರಚಿಕಿತ್ಸಾ ಘಟಕಗಳ ಕೊಠಡಿ ನಿರ್ಮಾಣ, ನವೀಕರಣ, ಕ್ಯಾನ್ಸರ್ ಚಿಕಿತ್ಸಾ ಘಟಕ, ಲಾಂಡ್ರಿ ಸೌಲಭ್ಯ, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ವಿದ್ಯುತ್ ಪೂರೈಕೆ ಸೇರಿದಂತೆ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪಟ್ಟಿ ಮಾಡಿ ವಿಸ್ತೃತ ಯೋಜನೆಯ ಪ್ರಸ್ತಾವ ಸಲ್ಲಿಸುವಂತೆ ಉಭಯ ಸಚಿವರು ಆಸ್ಪತ್ರೆಯ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯ ವೈದ್ಯಕೀಯ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಲಹೆ ಸೂಚಿಸಿದರು. ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ ಅವರಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮದ್ ಮೊಹಿಸಿನ್, ಮಂಡ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ನರಸಿಂಹಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

‘ಮಿಮ್ಸ್’ ಅಭಿವೃದ್ಧಿಗೆ ಸಲಹೆ ನೀಡಿದ ಶಾಸಕರು ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ಧಿ ಕುರಿತು ವಿಸ್ತೃತ ಚರ್ಚೆ ತುರ್ತು ಚಿಕಿತ್ಸಾ ಘಟಕ ನಿರ್ಮಾಣಕ್ಕೆ ಮನವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.