ಸೋಮವಾರ, ಸೆಪ್ಟೆಂಬರ್ 23, 2019
24 °C

ಬೇಬಿಬೆಟ್ಟ: ಸೆ. 16 ರವರೆಗೆ ಕಲ್ಲು ಗಣಿಗಾರಿಕೆಗೆ ನಿಷೇಧಾಜ್ಞೆ

Published:
Updated:

ಪಾಂಡವಪುರ: ಕೆಆರ್‌ಎಸ್‌ ಜಲಾಶಯದ ಬಳಿ ಭಾರಿ ಶಬ್ದ ಕೇಳಿ ಬಂದಿದ್ದರಿಂದ, ತಾಲ್ಲೂಕಿನ ಬೇಬಿಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಸೆ. 16 ರವರೆಗೆ ಕಲ್ಲು ಗಣಿಗಾರಿಕೆ ನಡೆಸದಂತೆ ತಹಶೀಲ್ದಾರ್ ಪ್ರಮೋದ್ ಎಲ್‌.ಪಾಟೀಲ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಈ ಪ್ರದೇಶಗಳಲ್ಲಿ ನಡೆಯುತ್ತಿರುವ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ಗಳ ಮೇಲೆ ಭಾನುವಾರವೂ ದಾಳಿ ನಡೆಸಿದ ಅಧಿಕಾರಿಗಳ ತಂಡ 14 ಸ್ಟೋನ್‌ ಕ್ರಷರ್‌ಗಳನ್ನು ಸ್ಥಗಿತಗೊಳಿಸಿದೆ. ಶನಿವಾರ 25 ಸ್ಟೋನ್‌ ಕ್ರಷರ್‌ಗಳಿಗೆ ಬೀಗ ಜಡಿಯಲಾಗಿತ್ತು.

Post Comments (+)