ನಾಗಮಂಗಲ: ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್.ಬೋಸರಾಜು ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬೆಳಿಗ್ಗೆ 10 ಗಂಟೆಗೆ ಸಚಿವರು ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕ್ಷೇತ್ರಾದಿದೇವತೆಗಳ ದರ್ಶನ ಪಡೆದರು. ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು.
ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಸಚಿವರನ್ನು ಸ್ವಾಮೀಜಿ ಗೌರವಿಸಿದರು.
ಆದಿಚುಂಚನಗಿರಿ ಬೆಟ್ಟದ ಬಳಿ ನಿರ್ಮಾಣವಾಗುತ್ತಿರುವ ವಿಜ್ಞಾನ ಕೇಂದ್ರಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿಯನ್ನು ವೀಕ್ಷಿಸಿದರು. ಮಠದ ಎಂಜಿನಿಯರ್ ಶಿವಕುಮಾರ್ ಮತ್ತು ಅಧಿಕಾರಿಗಳು ಜೊತೆಗಿದ್ದರು.