ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ್‌ ಘೋಷಣೆ – ಬಿಜೆಪಿ ರಾಜಕಾರಣ: ಸಚಿವ ಚಲುವರಾಯಸ್ವಾಮಿ

ಶ್ರೀರಂಗಪಟ್ಟಣದಲ್ಲಿ ಸಚಿವ ಚಲುವರಾಯಸ್ವಾಮಿ ಟೀಕೆ
Published 29 ಫೆಬ್ರುವರಿ 2024, 15:28 IST
Last Updated 29 ಫೆಬ್ರುವರಿ 2024, 15:28 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಟೀಕಿಸಿದರು.

ಪಟ್ಟಣದಲ್ಲಿ ತಾಲ್ಲೂಕು ಕೃಷಿಕ ಸಮಾಜ, ನಾಗರತ್ಮ ಪಿ. ಗಿರೀಗೌಡ ಸ್ಮರಣಾರ್ಥ ನಿರ್ಮಿಸಿರುವ ಕೃಷಿ ಭವನಕ ಭವನವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ನಿಜವಾಗಿದ್ದ ಪಕ್ಷದಲ್ಲಿ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ಗೃಹ ಸಚಿವರು ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿಗೆ ಕ್ರಮ ಬೇಕಿಲ್ಲ; ರಾಜಕಾರಣ ಬೇಕು. ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇರುವುದರಿಂದ ಅವರು ಈ ವಿಷಯವನ್ನು ದೊಡ್ಡದು ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಜಿಲ್ಲೆಯಲ್ಲಿ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೊಳವೆ ಬಾವಿ ಕೊರೆಸಲಾಗುತ್ತಿದೆ. ಕೆಲವೆಡೆ ಟ್ಯಾಂಕರ್‌ ಮೂಲಕವೂ ನೀರು ಸರಬರಾಜು ಮಾಡಲಾಗುತ್ತಿದೆ. ಟಾಸ್ಕ್‌ ಫೋರ್ಸ್ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಬಗ್ಗೆ ನಿಗಾ ವಹಿಸಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ನಮ್ಮ ಪಕ್ಷದ ಸಂಭಾವ್ಯ ಅಭ್ಯರ್ಥಿ ಸ್ಟಾರ್‌ ಚಂದ್ರು ಹೊಸ ಮುಖ ಎಂಬುದು ಮುಖ್ಯ ಅಲ್ಲ. ದಿನೇಶ್‌ ಗೂಳಿಗೌಡ ನನಗೇ ಪರಿಚಯ ಇರಲಿಲ್ಲ. ಆದರೂ ಗೆದ್ದಿದ್ದಾರೆ. ಸ್ಟಾರ್‌ ಚಂದ್ರು ಕಾಂಗ್ರೆಸ್‌ ಪಕ್ಷದಲ್ಲಿ ಸಕ್ರಿಯವಾದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಶಾಸಕ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್‌ ಸದಸ್ಯರಾದ ಮಧು ಮಾದೇಗೌಡ, ದಿನೇಶ್‌ ಗೂಳಿಗೌಡ, ಕೃಷಿಕ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಡಾ.ಪಿ. ಗಿರೀಗೌಡ, ಉಪಾಧ್ಯಕ್ಷ ಕಡತನಾಳು ಬಾಲಕೃಷ್ಣ, ಜಿಲ್ಲಾ ಪ್ರತಿನಿಧಿ ಬಿ.ಎಂ. ಸುಬ್ರಹ್ಮಣ್ಯ, ನಿರ್ದೇಶಕರಾದ ಬಿ.ಎಸ್‌. ಚಂದ್ರಶೇಖರ್‌, ಕುಮಾರ್‌, ಉಮಾಶಂಕರ್‌, ಹನುಮಂತಯ್ಯ, ಧನಂಜಯ, ಜಯರಾಂ, ಯೋಗೇಶ್‌, ದಿವಾಕರ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್‌. ಅಶೋಕ್‌, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT