ನಾಗಮಂಗಲ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಂದಿನಿಂದ ರಾಜ್ಯದ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ಸವಲತ್ತುಗಳನ್ನು ನೀಡಲಾಗುತ್ತಿದೆ. ಎಲ್ಲಾ ಇಲಾಖೆಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬೇಕು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ತಿರುಗನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯ ಮಳೆಯಾಶ್ರಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ಗ್ರಾಮದ 65 ಮಂದಿ ಅರ್ಹ ಫಲಾನುಭವಿ ರೈತರಿಗೆ ರಿಯಾಯಿತಿ ದರದಲ್ಲಿ ಮೇವು ಕತ್ತರಿಸುವ ಯಂತ್ರಗಳನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಕೇವಲ 5 ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗಿಲ್ಲ. ನಾಡಿನ ರೈತರು, ಮಹಿಳೆಯರು ಸೇರಿದಂತೆ ಎಲ್ಲ ವರ್ಗದ ಜನಸಾಮಾನ್ಯರ ಶ್ರೇಯೋಭೀವೃದ್ಧಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಕೃಷಿ ಇಲಾಖೆಯಲ್ಲಿ ಪ್ರತಿ ವರ್ಷ ರೈತರಿಗೆ ಅನೇಕ ಸವಲತ್ತುಗಳನ್ನು ಪೂರೈಸಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ರೈತರ ಹಿತಕಾಯುವ ಉದ್ದೇಶದಿಂದ ಯೋಜನೆಗಳನ್ನು ಹೆಚ್ಚಿಸಿ ಗರಿಷ್ಠ ಪ್ರಮಾಣದಲ್ಲಿ ಸವಲತ್ತುಗಳನ್ನು ನೀಡಲಾಗುತ್ತಿದೆ. ಕಳೆದ ಮೂರು ವರ್ಷದಿಂದ ತಾಲೂಕಿನ ಅರ್ಹ ಫಲಾನುಭವಿ ರೈತರಿಗೆ ₹3.10 ಕೋಟಿ ವೆಚ್ಚದ 668 ಮೇವು ಕತ್ತರಿಸುವ ಯಂತ್ರಗಳನ್ನು ವಿತರಿಸಲಾಗಿದೆ’ ಎಂದರು.

‘ಬೆಳೆ ವಿಮೆ ಮಾಡಿಸಿರುವ ರಾಜ್ಯದ 28ಲಕ್ಷ ರೈತರ ಬ್ಯಾಂಕ್ ಉಳಿತಾಯ ಖಾತೆಗೆ ₹6 ಸಾವಿರ ಕೋಟಿ ಹಣ ಪಾವತಿಯಾಗಿದೆ. ಹಾಗಾಗಿ ರೈತರು ಇಲಾಖೆಯಲ್ಲಿ ದೊರಕುವ ರಿಯಾಯ್ತಿ ದರದ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ, ಶೇ.90ರ ಸಬ್ಸಿಡಿಯಲ್ಲಿ ತುಂತುರು ನೀರಾವರಿ, ಟಾರ್ಪಲ್ ಸೇರಿದಂತೆ ವಿವಿಧ ಕೃಷಿ ಪರಿಕರಗಳನ್ನು ಪಡೆದುಕೊಂಡು ಬುದ್ಧಿವಂತರಾಗಿ ಸ್ವಾವಲಂಬಿ ಜೀವನ ನಡೆಸಬೇಕು’ ಎಂದರು.

ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ, ಮನ್ಮುಲ್ ನಿರ್ದೇಶಕ ಲಕ್ಷ್ಮೀನಾರಾಯಣ, ಮುಖಂಡರಾದ ಆರ್.ಕೃಷ್ಣೇಗೌಡ, ನಾಗಣ್ಣ, ಪರಮೇಶ್, ದೇವರಾಜು, ಹಂದೇನಹಳ್ಳಿ ಮಹದೇವ, ರಘು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.