ಮದ್ದೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಜೆಡಿಎಸ್, ಬಿಜೆಪಿಯವರ ಮಾತಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.

ಶನಿವಾರ ಕೊಪ್ಪ ಕೆರೆ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಹ ಮಹಿಳಾ ಫಲಾನುಭವಿಗಳಿಗೆ 2 ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಹಣ ಬಂದಿಲ್ಲ. ಆದರೆ ಆದಷ್ಟು ಬೇಗ ಯೋಜನೆಯಡಿ ಹಣ ಖಾತೆಗಳಿಗೆ ಜಮೆಯಾಗಲಿದೆ ಎಂದರು.

ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ ಅವರು, ಕೊಪ್ಪದಲ್ಲಿ ನಾಡ ಕಚೇರಿ ನಿರ್ಮಾಣ, ಪೊಲೀಸ್ ಠಾಣೆಗೆ ಹೊಸ ಕಟ್ಟಡ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕೊಪ್ಪ ಕೆರೆಯಿಂದ ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಯಲು ಕಾಲುವೆ ಮತ್ತು ನಾಲೆಗಳ ನಿರ್ಮಾಣ ಸೇರಿದಂತೆ ನೀರಾವರಿ ಇಲಾಖೆಗೆ ಸುಮಾರು ₹100 ಕೋಟಿ ಹಣ ಬಿಡುಗಡೆಗೊಳಿಸಿ ಅಭಿವೃದ್ಧಿ ಮಾಡಲಾಗುವುದು. ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಿಂದ ಕೊಪ್ಪದವರೆಗೆ ಜೋಡಿ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಕೊಪ್ಪವನ್ನು ಪಟ್ಟಣದ ಪಂಚಾಯಿತಿ ಮಾಡುವ ಸಂಬಂಧ ಅಧಿಕಾರಿಗಳ ಜತೆಗೆ ಚರ್ಚೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಂಡ್ಯದ ವಿಶ್ವ ವಿದ್ಯಾಲಯವನ್ನು ಮೈಸೂರಿಗೆ ವಿಲೀನ ಮಾಡುತ್ತಿರುವ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ಮಂಡ್ಯ ವಿಶ್ವ ವಿದ್ಯಾನಿಯವನ್ನು ಮೈಸೂರು ವಿಶ್ವ ವಿದ್ಯಾಲಯಕ್ಕೆ ವಿಲೀನ ಮಾಡುವಂತೆ ಯಾರು ಹೇಳಿಲ್ಲ. ಆದರೆ ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರು ಮೈಸೂರು ವಿದ್ಯಾಲಯಕ್ಕೆ ವಿಲೀನ ಮಾಡಿದರೆ ಒಳ್ಳೆಯದು ಎಂದು ಹೇಳುತ್ತಿದ್ದಾರೆ. ಈ ಸಂಬಂಧ ಉಪ ಸಮಿತಿ ಮಾಡಲಾಗಿತ್ತು. ಅವರು ಕೂಡ ವಿಲೀನ ಮಾಡಿ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮುಂದೆ ಸರ್ಕಾರ ನಿರ್ಧಾರ ಮಾಡಲಿದೆ ಎಂದರು.

ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ತಾ.ಪಂ ಮಾಜಿ ಉಪಾಧ್ಯಕ್ಷರಾದ ಬೆಕ್ಕಳಲೆ ರಘು, ರಾಮಚಂದ್ರ, ಮಾಜಿ ಸದಸ್ಯ ತೋಯಾಜಾಕ್ಷ, ಗ್ರಾ.ಪಂ ಸದಸ್ಯರಾದ ಕುಮಾರ್ ಕೊಪ್ಪ, ಪರ್ವೀಜ್ ಅಹಮದ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.