ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌ ಬಾಬು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಇದೆ: ಎಸ್‌ಟಿ ಸೋಮಶೇಖರ್

Last Updated 1 ಡಿಸೆಂಬರ್ 2021, 11:08 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ವಿಧಾನ ಪರಿಷತ್‌ ಚುನಾವಣೆಯ ಬೆಂಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆಜಿಎಫ್‌ ಬಾಬು ಅವರು ಕ್ರಿಮಿನಲ್‌ ಅಪರಾಧ ಹಿನ್ನೆಲೆಯುಳ್ಳವರಾಗಿದ್ದು ಆ ಬಗ್ಗೆ ಶೀಘ್ರ ದಾಖಲೆ ಬಿಡುಗಡೆ ಮಾಡಲಾಗುವುದು’ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ತಾಲ್ಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಭಾರತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ, ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಮಗಳು ಮತ್ತು ಪತ್ನಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಸೇರಿದಂತೆ ಕೆಜಿಎಫ್‌ ಬಾಬು ವಿರುದ್ಧ ಸುಮಾರು 40 ಪ್ರಕರಣಗಳು ದಾಖಲಾಗಿವೆ. ಜನರಿಗೆ ₹ 60 ಕೋಟಿಯಷ್ಟು ಮೋಸ ಮಾಡಿದ್ದಾರೆ. 3 ತಿಂಗಳು ಗಡಿಪಾರಾಗಿದ್ದು, ಜೈಲುವಾಸವನ್ನೂ ಅನುಭವಿಸಿದ್ದಾರೆ ಎಂದು ಡಿಸಿಪಿ ಅವರೇ ಹೇಳಿದ್ದಾರೆ. ಇದು ಗಾಬರಿ ಹುಟ್ಟಿಸುವ ಸಂಗತಿ’ ಎಂದು ಅವರು ಹೇಳಿದರು.

‘ಕೆಜಿಎಫ್‌ ಬಾಬು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ₹1,700 ಕೋಟಿ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅವರ ಬಳಿ ಅದಕ್ಕಿಂತ ಎರಡು ಪಟ್ಟು ಆಸ್ತಿ ಇದೆ. ಅವರ ಹಿಂದೆ ಯಾವ ಡೆವಲಪರ್‌ಗಳು ಇದ್ದಾರೆ ಎಂಬುದೂ ಗೊತ್ತಿದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಬೆಂಗಳೂರಿನಲ್ಲಿ ದಾಖಲೆ ಬಿಡುಗಡೆ ಮಾಡಲಾಗುವುದು’ ಎಂದು ಸಚಿವರು ತಿಳಿಸಿದರು.

‘ಮಂಡ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಗೂಳಿಗೌಡ ನನ್ನ ಹೆಸರು ಬಳಸಿಕೊಂಡು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎರಡು ನಿವೇಶನಗಳನ್ನು ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಇತ್ತೀಚೆಗಷ್ಟೇ ತಿಳಿಸಿದ್ದಾರೆ’ ಎಂದು ಸೋಮಶೇಖರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT