ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮೃತದೇಹ ಅಂತ್ಯಕ್ರಿಯೆಯಲ್ಲಿ ಲೋಪ

ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ, ತಾಲ್ಲೂಕು ವೈದ್ಯಾಧಿಕಾರಿ ಸ್ಪಷ್ಟನೆ
Last Updated 10 ಏಪ್ರಿಲ್ 2021, 2:20 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ಆರೋಗ್ಯ ಇಲಾಖೆ ಕೋವಿಡ್‌ ಕಾರ್ಯಸೂಚಿ ಅನ್ವಯ ಶವಸಂಸ್ಕಾರ ನಡೆಸುತ್ತಿಲ್ಲ. ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡುವ ಮೂಲಕ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಶುಕ್ರವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆರೋಪಿಸಿದರು.

ಅಧ್ಯಕ್ಷೆ ಶಿವಕುಮಾರಿ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್ ವಿಷಯ ಪ್ರಸ್ತಾಪಿಸಿ, ಮೃತವ್ಯಕ್ತಿಯ ಸಂಬಂಧಿಕರು ಶವವನ್ನು ಹೂಳುವ ಬದಲಾಗಿ ಸುಡುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರೀಮಂತರಿಗೆ ಒಂದು ರೀತಿ, ಬಡವರಿಗೆ ಒಂದು ರೀತಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಸದಸ್ಯರು ಧ್ವನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ತಾಲೂಕು ವೈದ್ಯಾಧಿಕಾರಿ ಡಾ.ಜವರೇಗೌಡ, ಕೊರೊನಾ ಸೋಂಕಿನಿಂದ ಮೃತ ಪಟ್ಟವರನ್ನು ಸುಡುವುದಕ್ಕೆ ಅವ ಕಾಶವಿಲ್ಲ. 10 ಅಡಿ ಆಳದ ಗುಂಡಿ ತೆಗೆದು ಹೂಳಲಾಗುತ್ತಿದೆ. ತಾಲ್ಲೂ ಕಿನಲ್ಲಿ ಕೋವಿಡ್‌ನಿಂದ 63 ಜನರು ಮೃತಪಟ್ಟಿದ್ದು, ಎಲ್ಲರನ್ನೂ ಹೂಳಲಾ ಗಿದೆ. ಯಾರಿಗೂ ಸುಡುವು ದಕ್ಕೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕ ಎಂ.ಶ್ರೀನಿವಾಸ್ ಮಾತನಾಡಿ ‘ಕೋವಿಡ್‌ ಪೀಡಿತ ವ್ಯಕ್ತಿ ಗುರುವಾರ ಮೃತಪಟ್ಟಿದ್ದು, ಆತನ ಅಂತ್ಯಕ್ರಿಯೆ ನೆರವೇರಿಸಲು ಹೋದ ವೇಳೆ ಊರಿನ ಜನರೆಲ್ಲರೂ ನನಗೆ ಕರೆ ಮಾಡಿ, ಯಾವ ಮುಂಜಾಗ್ರತೆಯೂ ಇಲ್ಲದೆ ಅಂತ್ಯಕ್ರಿಯೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಆರೋಗ್ಯ ಇಲಾಖೆಯವರು ಎಲ್ಲಿ ಹೋಗಿದ್ದರು’ ಎಂದು ಪ್ರಶ್ನಿಸಿದರು.

ಟಿಎಚ್‌ಒ ಮಾತನಾಡಿ ‘ಗುರು ವಾರ ಮೃತಪಟ್ಟ ವ್ಯಕ್ತಿಗೆ ಹಿಂದೆ ಕೋವಿಡ್‌ ದೃಢಪಟ್ಟಿತ್ತು. ಆದರೆ, ಅದಕ್ಕೂ ಮೊದಲು ಆತ ಚಿಕಿತ್ಸೆ ಪಡೆದು ಕೋವಿಡ್‌ ವರದಿ ನೆಗೆಟಿವ್‌ ಬಂದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆತ ಬೇರೆ ಕಾರ ಣದಿಂದ ಮೃತಪಟ್ಟಿದ್ದಾರೆ. ಕೊರೋನಾ ಸೋಂಕಿನಿಂದಲ್ಲ’ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶ್ರೀನಿವಾಸ್ ‘ಇದನ್ನು ಜನರಿಗೆ ತಿಳಿಸಿ, ಮನವರಿಕೆ ಮಾಡಬೇಕಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಮಾತನಾಡಿ ‘ವಸತಿ ಶಾಲೆಯ 3 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಆ ಮಕ್ಕಳ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕವಾಗಿ ಇರಿಸಿ ನಿಗಾ ವಹಿಸಲಾಗಿದೆ’ ಎಂದರು.

ಸದಸ್ಯ ಮಂಜೇಗೌಡ ಮಾತನಾಡಿ ‘ತಾಲ್ಲೂಕಿನ ಅಂಗನವಾಡಿಗಳ ಸ್ಥಿತಿ ಶೋಚನೀಯವಾಗಿದೆ. ಚಾವಣಿ ಕುಸಿದು ಬೀಳುವ ಹಂತದಲ್ಲಿದ್ದು, ಅವುಗಳ ದುರಸ್ತಿ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಶಿಶು ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ‘ಅಂಗ ನವಾಡಿಗಳ ದುರಸ್ತಿಗೆ ಖನಿಜ ನಿಗಮ ಹಾಗೂ ಶಾಸಕರ ಅನುದಾನದಿಂದ ಹಣ ಪಡೆದು ಹಂತ ಹಂತವಾಗಿ ದುರಸ್ತಿ ಮಾಡಲಾಗುತ್ತಿದೆ’ ಎಂದು ಹೇಳಿದರು.

ಅಧ್ಯಕ್ಷೆ ಎಚ್.ಎಸ್.ಶಿವಕುಮಾರಿ ಮಾತನಾಡಿ ‘ಚಿಂದಗಿರಿದೊಡ್ಡಿಯಲ್ಲಿ ಅಂಗನವಾಡಿ ಬಾಡಿಗೆ ಕಟ್ಟಡದಲ್ಲಿ ನಡೆ ಯುತ್ತಿದೆ. ಅಂಗನವಾಡಿ ನಿರ್ಮಾಣಕ್ಕೆ ಸೂಕ್ತ ಜಾಗ ಇದ್ದರೂ ಹೊಸ ಅಂಗನ ವಾಡಿ ಕಟ್ಟಡ ನಿರ್ಮಿಸುತ್ತಿಲ್ಲ. ಬೇರೆಡೆ ಮಕ್ಕಳಿಲ್ಲದಿದ್ದರೂ ನೂತನ ಅಂಗನ ವಾಡಿ ಕಟ್ಟಡ ನಿರ್ಮಿಸಲಾ ಗುತ್ತಿದೆ. ಆದರೆ, ಮಕ್ಕಳು ದಾಖ ಲಾಗಿದ್ದರೂ ಕಟ್ಟಡ ಇಲ್ಲದೆ ಪರದಾ ಡುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಉಪಾಧ್ಯಕ್ಷೆ ಶ್ವೇತಾ, ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ.ವೇಣುಗೋಪಾಲ್, ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್‍, ಲೆಕ್ಕಾಧಿಕಾರಿ ಮಂಜುಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT