ಪಾಂಡವಪುರ: ‘ಕಳ್ಳತನ ಮಾಡಿದ್ದಾನೆ ಎಂದು ಭಾವಿಸಿ ವ್ಯಕ್ತಿಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕೆನ್ನಾಳು ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ವಿ.ಸಿ.ಕಾಲೊನಿಯ ಮಂಜುನಾಥ್ ಹಲ್ಲೆಗೊಳಗಾದವರು.

ಕೆನ್ನಾಳು ಗ್ರಾಮದ ತನ್ನ ಸಂಬಂಧಿಕರ ಮನೆಗೆ ಹೋಗುತ್ತಿದ್ದ ವೇಳೆ ಅನಾರೋಗ್ಯದಿಂದ ಸುಸ್ತಾಗಿ, ಅಲ್ಲೇ ಇದ್ದ ಎತ್ತಿನ ಗಾಡಿ ಬಳಿ ಮಂಜುನಾಥ್ ವಿಶ್ರಾಂತಿ ಪಡೆಯುತ್ತಿದ್ದಾಗ ಗ್ರಾಮದ ಗೌತಮ್, ಸಂತೋಷ್ ಸೇರಿದಂತೆ ಹಲವರು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಮಂಜುನಾಥನ ಪತ್ನಿ ಮತ್ತು ಕುಟುಂಬದವರು ಸ್ಥಳಕ್ಕೆ ಹೋಗಿ ವಿಚಾರಿಸಿದಾಗ ಆರೋಪಿಗಳು ಅವರಿಗೂ ಬೆದರಿಸಿ, ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಕೆನ್ನಾಳು ಗ್ರಾಮದ ಗೌತಮ್, ಸಂತೋಷ್, ಲಕ್ಷ್ಮಮ್ಮ ಅವರು ಸೇರಿದಂತೆ ಆರು ಜನರು ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದ್ದಾರೆ ಎಂದು ಮಂಜುನಾಥ್ ಪಾಂಡವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.