ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಮೆರಿಕಕ್ಕೆ

ಪತ್ನಿ, ಮಕ್ಕಳ ನೋಡಲು ವಿದೇಶಕ್ಕೆ: ಚುನಾವಣೆ ಬಳಿಕ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರ ಬಿಟ್ಟು ವಾಪಸ್ಸು ಹೋಗುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಚರ್ಚೆಯಾಗಿತ್ತು
Published 1 ಜೂನ್ 2023, 16:01 IST
Last Updated 1 ಜೂನ್ 2023, 16:01 IST
ಅಕ್ಷರ ಗಾತ್ರ

ಪಾಂಡವಪುರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಬೆಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದರು.

ಅಮೆರಿಕದಲ್ಲಿರುವ ಪತ್ನಿ ಶಿಲ್ಪ ಹಾಗೂ ತನ್ನ ಇಬ್ಬರು ಮಕ್ಕಳನ್ನು ನೋಡಲು ದರ್ಶನ್ ತೆರಳಿದ್ದಾರೆ. ಜೂ.12ರಂದು ವಾಪಸ್‌ ಬರಲಿದ್ದಾರೆ ಎಂದು ದರ್ಶನ್ ಪುಟ್ಟಣ್ಣಯ್ಯ ತಾಯಿ ಸುನೀತಾ ಪುಟ್ಟಣ್ಣಯ್ಯ ಪ್ರಜಾವಾಣಿಗೆ ತಿಳಿಸಿದರು.‌

ದರ್ಶನ್ ಪುಟ್ಟಣ್ಣಯ್ಯ ಕಳೆದ 2022 ಡಿಸೆಂಬರ್‌ 23ರಂದು ಮೇಲುಕೋಟೆ ಕ್ಷೇತ್ರಕ್ಕೆ ಬಂದು ಚುನಾವಣಾ ಪೂರ್ವ ಸಿದ್ದತೆ ನಡೆಸಿದ್ದರು.  ಇಲ್ಲಿಯವರೆಗೂ ದರ್ಶನ್ ಕ್ಷೇತ್ರದಲ್ಲಿದ್ದು, ಚುನಾವಣೆ ತಯಾರಿ ನಡೆಸಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ದರ್ಶನ್ ಪತ್ನಿ ಶಿಲ್ಪ ಅಮೆರಿಕದಿಂದ ಬಂದು ದರ್ಶನ್‌ಗೆ ಬೆಂಬಲವಾಗಿ ನಿಂತಿದ್ದರು. ಬಳಿಕ ತೆರಳಿದ್ದರು. ಚುನಾವಣೆ ಬಳಿಕ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರ ಬಿಟ್ಟು ವಾಪಸ್ಸು ಹೋಗುತ್ತಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT