ಕೆ.ಆರ್.ಪೇಟೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ವತಿಯಿಂದ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಎಚ್.ಟಿ. ಮಂಜು ಚಾಲನೆ ನೀಡಿದರು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳ ವತಿಯಿಂದ 20ಕ್ಕೂ ಹೆಚ್ಚು ಮಹಿಳೆಯರಿಗೆ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರ ಮತ್ತು 15 ಮಂದಿ ನಿರುದ್ಯೋಗಿ ಯುವಕರಿಗೆ ತಲಾ ₹3 ಲಕ್ಷ ಸಬ್ಸಿಡಿ ರೂಪದಲ್ಲಿ ಕಾರುಗಳನ್ನು ವಿತರಿಸಿ ಮಾತನಾಡಿ, ‘ಫಲಾನುಭವಿಗಳು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕು’ ಎಂದು ಸಲಹೆ ನೀಡಿದರು.

‘ವಾಹನ ಖರೀದಿ ಮಾಡಲು ₹3 ರಿಂದ ₹5 ಲಕ್ಷ ಗಳವರೆಗೆ ಸಹಾಯಧನವನ್ನು ನೀಡಲಾಗುವುದು. ಉಳಿದ ಹಣವನ್ನು ಬ್ಯಾಂಕಿನಲ್ಲಿ ಸಾಲದ ರೂಪದಲ್ಲಿ ಪಡೆದು ಕಾರು ಖರೀದಿ ಮಾಡಿ ಬಾಡಿಗೆಗೆ ಓಡಿಸಿ ಸ್ವಾವಲಂಬಿ ಜೀವನ ನಡೆಸಿ’ ಎಂದರು.

ಇಲಾಖೆಯ ಜಿಲ್ಲಾ ಅಧಿಕಾರಿ ಬೋರೇಗೌಡ, ಪ್ರಮುಖರಾದ ಬಸವಲಿಂಗಪ್ಪ, ಹೊಸಹೊಳಲು ಅಶೋಕ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.