ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಕೃಷ್ಣಮೂರ್ತಿ ಭೇಟಿ ಮಾಡಿದ ಸುನೀಲ್ ಬೋಸ್

Published 26 ಮಾರ್ಚ್ 2024, 14:16 IST
Last Updated 26 ಮಾರ್ಚ್ 2024, 14:16 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಶಾಸಕ ಎ.ಆರ್.ಕೃಷ್ಣಮೂರ್ತಿ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ನಗರಕ್ಕೆ ಆಗಮಿಸಿದ ಅವರು ಸ್ಥಳೀಯ ಮುಖಂಡರು ಸೇರಿದಂತೆ ಅನೇಕ ಕಾರ್ಯಕರ್ತರನ್ನು ಭೇಟಿ ಮಾಡಿ ಗೋಪ್ಯವಾಗಿ ಸಭೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್‌ ಬೋಸ್‌, ‘ಕಾಂಗ್ರೆಸ್ ಪಕ್ಷದಿಂದ ನನಗೆ ವರಿಷ್ಠರು ಟಿಕೆಟ್ ನೀಡಿದ್ದಾರೆ. ಹಾಗಾಗಿ ಶಾಸಕರು ಹಾಗೂ ಮುಖಂಡರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ. ನಮಗೆ ಗೆಲುವು ಖಚಿತ, ಹಾಗಂತ ಮೈಮರೆಯುವುದಿಲ್ಲ’ ಎಂದರು.

‘ಈಗ ಕೆಲವು ಮುಖಂಡರನ್ನು ಭೇಟಿ ಮಾಡಿ ಅವರಿಂದ ಮಾರ್ಗದರ್ಶನ ಪಡೆದಿದ್ದೇನೆ, ನಾಳೆಯಿಂದ ಅಧಿಕೃತವಾಗಿ ಎಲ್ಲಾ ಕ್ಷೇತ್ರಗಳಿಗೂ ಭೇಟಿ ನೀಡಿ ಸಾರ್ವಜನಿಕರ ಹಾಗೂ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಮಾಡುತ್ತೇನೆ. ಹಾಗಾಗಿ ನನ್ನ ಗೆಲುವಿಗೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಸಹಕಾರ ನೀಡಬೇಕು’ ಎಂದು ಹೇಳಿದರು.

ಚಾಮುಲ್ ನಿರ್ದೇಶಕ ಮಧುವನಹಳ್ಳಿ ನಂಜುಂಡಸ್ವಾಮಿ, ಮುಖಂಡ ಮುಡಿಗುಂಡ ಶಾಂತರಾಜು, ಉದಯಕುಮಾರ್, ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT