ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀರಂಗಪಟ್ಟಣ: ಜವಾಬ್ದಾರಿ ನಿರ್ವಹಿಸಲು ಅಧಿಕಾರಿಗಳಿಗೆ ಶಾಸಕ ಸೂಚನೆ

ಶ್ರೀರಂಗಪಟ್ಟಣ: ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ
Published : 1 ಅಕ್ಟೋಬರ್ 2024, 15:25 IST
Last Updated : 1 ಅಕ್ಟೋಬರ್ 2024, 15:25 IST
ಫಾಲೋ ಮಾಡಿ
Comments

ಶ್ರೀರಂಗಪಟ್ಟಣ: ‘ದಸರಾ ಉತ್ಸವದ ಆರಂಭದಿಂದ ಕೊನೆಯ ದಿನದವರೆಗೆ ಎಲ್ಲ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ದಸರಾ ಉತ್ಸವ ಆರಂಭವಾಗುವ ಕಿರಂಗೂರು ಬನ್ನಿ ಮಂಟಪದಿಂದ ಶ್ರೀರಂಗನಾಥಸ್ವಾಮಿ ದೇವಾಲಯ ಮೈದಾನದ ವರೆಗೆ, ಮೆರವಣಿಗೆ ಸಾಗುವ ಮಾರ್ಗವನ್ನು ತಳಿರು, ತೋರಣಗಳಿಂದ ಅಲಂಕರಿಸಬೇಕು. ಜಂಬೂ ಸವಾರಿಯಲ್ಲಿ ಮೂರು ಆನೆಗಳು ಪಾಲ್ಗೊಳ್ಳುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಚಲನವಲನದ ಬಗ್ಗೆ ನಿಗಾ ವಹಿಸಬೇಕು. ಮೂರು ಕಿ.ಮೀ. ಸಾಗುವ ಮೆರವಣಿಗೆಗೆ ಯಾವುದೇ ಅಡ್ಡಿ ಆಗದಂತೆ ಎಚ್ಚರವಹಿಸಬೇಕು’ ಎಂದರು.

‘ಸಾಂಸ್ಕೃತಿಕ ಕಾರ್ಯಕ್ರಮಗಳು ನಾಲ್ಕು ದಿನ ನಡೆಯಲಿದ್ದು, ವೇದಿಕೆ ನಿರ್ವಹಣೆ ಮತ್ತು ಅತಿಥಿ ಸತ್ಕಾರದಲ್ಲಿ ಲೋಪವಾಗಬಾರದು. ಕಲಾವಿದರನ್ನು ಗೌರವದಿಂದ ನಡೆಸಿಕೊಳ್ಳಬೇಕು. ದಸರಾ ಉತ್ಸವದ ಬಗ್ಗೆ ಪಟ್ಟಣ, ಗ್ರಾ.ಪಂ. ಕೇಂದ್ರ ಸ್ಥಾನ ಮತ್ತು ಗ್ರಾಮ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.

ಡಿಸಿ ಭೇಟಿ: ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಶೇಕ್ ತನ್ವೀರ್‌ ಆಸಿಫ್‌, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಜಂಬೂ ಸವಾರಿ ಸಾಗುವ ಮಾರ್ಗವನ್ನು ಮಂಗಳವಾರ ಪರಿಶೀಲಿಸಿದರು.

ಕಿರಂಗೂರು ವೃತ್ತದ ದಸರಾ ಬನ್ನಿ ಮಂಟಪ, ಬೆಂಗಳೂರು– ಮೈಸೂರು ಮುಖ್ಯ ರಸ್ತೆ, ಕುವೆಂಪು ವೃತ್ತ, ಪುರಸಭೆ ವೃತ್ತ, ಅಂಬೇಡ್ಕರ್‌ ವೃತ್ತ, ಮಿನಿ ವಿಧಾನಸೌಧ ವೃತ್ತ ಹಾಗೂ ಶ್ರೀರಂಗನಾಥಸ್ವಾಮಿ ದೇವಾಲಯ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ವೀಕ್ಷಿಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಅವರ ಜತೆ ಕಾವೇರಿ ನದಿ ಸ್ನಾನಘಟ್ಟಕ್ಕೂ ಅಧಿಕಾರಿಗಳ ತಂಡ ಭೇಟಿ ನೀಡಿತ್ತು.

ಕಾವೇರಿ ಆರತಿ ನಡೆಯುವ ಸ್ನಾನಘಟ್ಟದ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೇಣು, ಪುರಸಭೆ ಮುಖ್ಯಾಧಿಕಾರಿ ಎಂ. ರಾಜಣ್ಣ, ಡಿವೈಎಸ್ಪಿ ಮುರಳಿ, ಸಿಪಿಐ ಬಿ.ಎಸ್‌. ಪ್ರಕಾಶ್‌ ಜತೆಗಿದ್ದರು.

ಶ್ರೀರಂಗಪಟ್ಟಣದಲ್ಲಿ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ನಿರ್ಮಿಸುತ್ತಿರುವ ವೇದಿಕೆಯ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಜಿಲ್ಲಾಧಿಕಾರಿ ಕುಮಾರ ಜಿ.ಪಂ. ಸಿಇಒ ಶೇಕ್ ತನ್ವೀರ್‌ ಆಸಿಫ್‌ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಶ್ರೀರಂಗಪಟ್ಟಣದಲ್ಲಿ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ನಿರ್ಮಿಸುತ್ತಿರುವ ವೇದಿಕೆಯ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಜಿಲ್ಲಾಧಿಕಾರಿ ಕುಮಾರ ಜಿ.ಪಂ. ಸಿಇಒ ಶೇಕ್ ತನ್ವೀರ್‌ ಆಸಿಫ್‌ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT