ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

175 ಹಳ್ಳಿಗಳ ಮನೆಮನೆಗೆ ನೀರು ಸರಬರಾಜು: ಶಾಸಕ ರವಿಕುಮಾರ್‌ಗೌಡ

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಚಾಲನೆ
Published 18 ಡಿಸೆಂಬರ್ 2023, 14:03 IST
Last Updated 18 ಡಿಸೆಂಬರ್ 2023, 14:03 IST
ಅಕ್ಷರ ಗಾತ್ರ

ಮಂಡ್ಯ: ‘ತಾಲ್ಲೂಕಿನ 175 ಹಳ್ಳಿಗಳ ಪ್ರತಿ ಮನೆಗೂ ಶುದ್ಧ ಕಾವೇರಿ ನೀರು ಸರಬರಾಜು ಮಾಡಲಾಗುವುದು’ ಎಂದು ಶಾಸಕ ರವಿಕುಮಾರ್‌ಗೌಡ ಗಣಿಗ ಹೇಳಿದರು.

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿ ಕೊಳಾಯಿ ಸಂಪರ್ಕ ಕಲ್ಪಿಸಿ, ಮನೆ ಮನೆಗೆ ನೀರೊದಗಿಸುವ(ಜೆಜೆಎಂ)ಕಾಮಗಾರಿಗೆ ಭೂಮಿಪೂಜೆ ಮಾಡಲಾಗಿದ್ದು, ₹1.5 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಕುಂಠಿತಗೊಂಡಿದ್ದ ಕಾಮಗಾರಿಗಳು ವೇಗ ಪಡೆದುಕೊಳ್ಳುತ್ತಿವೆ’ ಎಂದರು.

ಬಳಿಕ ಕೆರೆಯಂಗಳದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಆಯೋಜಿಸಿದ್ದ 1 ಎಕರೆ ನಿವೇಶನದಲ್ಲಿ ವಿಷನ್ ವಾತ್ಯಲ್ಯ ಯೋಜನೆಯಡಿ ಬಾಲಮಂದಿರಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಸತಿ ಗೃಹ ನಿರ್ಮಿಸಲು ಅನುವಾಗುವಂತೆ ಖಾಲಿ ನಿವೇಶನಕ್ಕೆ ಕಾಂಪೌಂಡ್ ನಿರ್ಮಾಣಕ್ಕೆ ₹49.5 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಜಾಗದಲ್ಲಿ ಹೊಸ ಬೋರ್‌ವೆಲ್‌, ಪೈಪ್‌ಲೈನ್‌ ನಿರ್ಮಾಣ ಹಾಗೂ ನೀರು ಸರಬರಾಜು ಕಾಮಗಾರಿಗೆ ₹9.16 ಲಕ್ಷ ವೆಚ್ಚದಲ್ಲಿ ಚಾಲನೆ ನೀಡಿರುವುದಾಗಿ ತಿಳಿಸಿದರು.

ಮನ್‌ಮುಲ್‌ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್, ಹೊಸಬೂದನೂರು ಗ್ರಾ.ಪಂ. ಅಧ್ಯಕ್ಷೆ ಮಾನಸಾ, ಉಪಾಧ್ಯಕ್ಷೆ ಜಯಲಕ್ಷ್ಮಿ, ಸದಸ್ಯರಾದ ಕೆಂಪೇಗೌಡ, ಕುಮಾರ್, ಆರ್‌ಎಪಿಸಿಎಂಎಸ್ ಅಧ್ಯಕ್ಷ ಉಮ್ಮಡಹಳ್ಳಿ ಶೇಖರ್, ನಗರಸಭಾ ಸದಸ್ಯ ಜಾಕೀರ್‌ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಕೆ.ಆರ್.ಐಡಿ.ಎಲ್ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT