ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಕೆಂಪೇಗೌಡ ಪಾಕ್೯ ಅಭಿವೃದ್ಧಿಗೆ ಕ್ರಮ: ಶಾಸಕ ರವಿಕುಮಾರ್‌

ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆ: ಶಾಸಕ ರವಿಕುಮಾರ್‌ ಹೇಳಿಕೆ
Published 21 ಜೂನ್ 2024, 5:24 IST
Last Updated 21 ಜೂನ್ 2024, 5:24 IST
ಅಕ್ಷರ ಗಾತ್ರ

ಮಂಡ್ಯ: ನಗರದಲ್ಲಿರುವ ಪಾಕ್೯ಗಳ ಅಭಿವೃದ್ಧಿಗೆ ₹ 10 ಕೋಟಿ ಸರ್ಕಾರದಿಂದ ಮಂಜೂರಾಗಿದ್ದು, ಕೆಂಪೇಗೌಡ ಪಾಕ್೯ ಅನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ಬಿಡುಗಡೆಯಾಗಿರುವ ಅನುದಾನದಲ್ಲಿ ಪಾಕ್೯ ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಒಟ್ಟಿಗೆ ಸೇರಿ ಚರ್ಚಿಸಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕುರಿತು ತೀರ್ಮಾನಿಸೋಣ ಎಂದರು.

ಜೂನ್ 30ರಂದು ಜಯಂತಿ:

ಜೂನ್ 30 ಭಾನುವಾರವಾಗಿದ್ದು ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಕೃಷಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವರು ಸಹ ಜೂನ್ 30ರಂದು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಜೂನ್ 27ರ ಬದಲಾಗಿ ಜೂನ್ 30ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸೋಣ ಎಂದರು.

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಈ ಹಿಂದೆ ಪ್ರತಿ ತಾಲ್ಲೂಕಿಗೂ ₹50 ಸಾವಿರ ಅನುದಾನ ನೀಡಲಾಗುತ್ತಿತ್ತು. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈ ಬಾರಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ ₹1 ಲಕ್ಷ ಅನುದಾನ ನೀಡಿರುತ್ತಾರೆ ಎಂದರು.

ಮೆರವಣಿಗೆ:

ಜೂನ್ 30ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಅಂಬೇಡ್ಕರ್ ಭವನದವರೆಗೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಮೆರವಣಿಗೆ ನಡೆಯಲಿದೆ. ಇದರೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಸಂಘ ಸಂಸ್ಥೆಗಳ ಮುಖ್ಯಸ್ಥರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಿಸಬೇಕು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳು ಜೂನ್ 30ರಂದು ಸಂಜೆ 6 ಗಂಟೆಯಿಂದ ಖ್ಯಾತ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐದು ಮಹಾನ್ ವ್ಯಕ್ತಿಗಳನ್ನು ಸನ್ಮಾನಿಸಲಾಗುವುದು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್ ನಾಗರಾಜು ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕೆಂಪೇಗೌಡ ಜಯಂತಿ: ಪ್ರತಿ ತಾಲ್ಲೂಕಿಗೆ ₹1 ಲಕ್ಷ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಜೂನ್‌ 30ರಂದು ಜಯಂತಿ ಆಚರಣೆ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT