ಆಹಾರ ಸಾಮಗ್ರಿ ವಿಳಂಬ: ಕಪ್ಪುಪಟ್ಟಿಗೆ ಸೇರಿಸಿ’
‘ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಿಗೆ ತಿಂಗಳ ಕೊನೆಯಲ್ಲಿ ಆಹಾರ ಸಾಮಗ್ರಿ ವಿತರಣೆಯಾಗುತ್ತಿದ್ದು ಇದರಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತದೆ. ತಿಂಗಳ 5 ತಾರೀಖಿನೊಳಗೆ ಸರಬರಾಜು ಆಗಬೇಕು. ಟೆಂಡರ್‌ದಾರರು ಸರಿಯಾದ ಸಮಯಕ್ಕೆ ಸರಬರಾಜು ಮಾಡದಿದ್ದಲ್ಲಿ ‘ಕಪ್ಪುಪಟ್ಟಿ’ಗೆ ಸೇರಿಸಿ ಎಂದು ಸಚಿವರು ಸೂಚಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್ ಮಾತನಾಡಿ ‘ಬೆಂಗಳೂರು ಮತ್ತು ಮೈಸೂರು ಕಡೆಯಿಂದ ಬಂದು ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತ ಅಕ್ಕಿ ಸಾಗಣೆ ಮಾಡುತ್ತಿದ್ದವರನ್ನು ಬಂಧಿಸಿ ₹20 ಲಕ್ಷ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದೇವೆ. ಮೂರು ಪ್ರಕರಣಗಳು ದಾಖಲಾಗಿವೆ’ ಎಂದು ಸಭೆಗೆ ಮಾಹಿತಿ ನೀಡಿದರು.