ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಜನ್ಮದಿನ: 20ರವರೆಗೆ ಸೇವಾ ಸಪ್ತಾಹ

Last Updated 17 ಸೆಪ್ಟೆಂಬರ್ 2020, 7:01 IST
ಅಕ್ಷರ ಗಾತ್ರ

ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ‘ಸೇವಾ ಹಿ ಸಂಘಟನೆ’ ಪರಿಕಲ್ಪನೆಯೊಂದಿಗೆ ಸೆ. 20ರವರೆಗೆ ಸೇವಾ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಸಂಘಟನಾ ಉಸ್ತುವಾರಿ ಎ.ಮಂಜು ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ. 17ರಂದು ಪ್ರಧಾನ ಮಂತ್ರಿ ನರೇಂದ್ರ ಅವರ ಜನ್ಮ ದಿನವಾಗಿದ್ದು, ಜಿಲ್ಲಾ, ತಾಲ್ಲೂಕು, ಬೂತ್‌ ಮಟ್ಟದಲ್ಲಿ ಮೋದಿ ಅವರು ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ಕಷ್ಟದಲ್ಲಿರುವ ಜನರಿಗೆ ವಿವಿಧ ಸೇವಾ ಚಟುವಟಿಕೆಗಳ ಮೂಲಕ ನೆರವು ನೀಡಲಾಗುವುದು’ ಎಂದು ಹೇಳಿದರು.

ಜಿಲ್ಲೆಯ ಪ್ರತಿ ಮಂಡಲಗಳಲ್ಲಿ 70 ಅಂಗವಿಕಲರಿಗೆ ಕೃತಕ ಅಂಗ ಜೋಡಣೆ ಉಪಕರಣಗಳ ವಿತರಣೆ, 70 ಬಡ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಗಳ ವಿತರಣೆ, ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೊನಿಗಳಲ್ಲಿ ಹಣ್ಣು ವಿತರಣೆ, ಕೊರೊನಾ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ, ರಕ್ತದಾನ ಶಿಬಿರ, ಪ್ರತಿ ಬೂತ್‍ನಲ್ಲಿ 70 ವೃಕ್ಷಾರೋಹಣ ಕಾರ್ಯಕ್ರಮ ಮತ್ತು ಪರಿಸರ ಸಂರಕ್ಷಣೆ ಸಂಕಲ್ಪ ಕಾರ್ಯಕ್ರಮ, 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನ, ಪ್ಲಾಸ್ಟಿಕ್ ನಿಷೇಧಿಸುವ ಸಂಕಲ್ಪ, 70 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ, 70 ದೊಡ್ಡ ವರ್ಚುವಲ್ ಸಮಾವೇಶ ನಡೆಸಲಾಗುವುದು.

ಸೆ. 25ರಂದು ಪಂಡಿತ್ ದೀನ ದಯಾಳ್ ಜಯಂತಿ, ಅ. 2ರಂದು ಗಾಂಧಿ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನೂತನ ಸಂಘಟನಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ಪಕ್ಷ ಸಂಘಟನೆಗೆ, ಇಲ್ಲಿನ ರೈತರ ಸಮಸ್ಯೆ ಪರಿಹರಿಸಲು ಶ್ರಮಿಸುತ್ತೇನೆ. ಪಕ್ಷದಲ್ಲಿ ಕೆಲವು ಅಸಮಾಧಾನಗಳಿವೆ. ಅದನ್ನು ಶಮನಗೊಳಿಸಿ ಒಟ್ಟಾಗಿ ಮುನ್ನಡೆಸುತ್ತೇನೆ ಎಂದರು.

ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್, ಮಾಜಿ ಅಧ್ಯಕ್ಷ ಕೆ.ನಾಗಣ್ಣಗೌಡ, ನಗರ ಘಟಕದ ಅಧ್ಯಕ್ಷ ವಿವೇಕ್, ರಾಮಕೃಷ್ಣೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT