ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಾಯಿಯೇ ಸಂಸ್ಕಾರ ಕಲಿಸುವ ಮೊದಲ‌ ಗುರು: ನಿರ್ಮಲಾನಂದನಾಥ ಸ್ವಾಮೀಜಿ

Published : 21 ಆಗಸ್ಟ್ 2024, 13:58 IST
Last Updated : 21 ಆಗಸ್ಟ್ 2024, 13:58 IST
ಫಾಲೋ ಮಾಡಿ
Comments

ನಾಗಮಂಗಲ: ಮಗುವಿಗೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ತಾಯಿಯೇ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಮೊದಲ ಗುರುವಾಗಿದ್ದಾಳೆ ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಬಿ.ಜಿ. ನಗರದ ಬಿ.ಜಿ.ಎಸ್ ಮಾಡೆಲ್ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸವನ್ನು ಮಾಡಿಸಿದ ನಂತರ ಅವರು ಮಾತನಾಡಿದರು.

‘ನಾವು ಕಲಿತಿದ್ದರೆ ಮಾತ್ರವೇ ಸಮಾಜವನ್ನು ತಿದ್ದಲು ಸಾಧ್ಯ. ಅಲ್ಲದೇ ನಾವು ಗಳಿಸಿದ್ದರೆ ಮಾತ್ರವೇ ಸಮಾಜಕ್ಕೆ ನೀಡಲು ಸಾಧ್ಯ. ಮಕ್ಕಳ ಮನಸ್ಸಿನಲ್ಲಿ ಬಿತ್ತಿದ ಅಕ್ಷರಜ್ಞಾನವು‌ ಭವಿಷ್ಯದಲ್ಲಿ ಉತ್ತಮ ಫಲವನ್ನು ಕೊಡುತ್ತದೆ. ಆದ್ದರಿಂದ ಧಾರ್ಮಿಕ, ಆಧ್ಯಾತ್ಮಿಕ ಮೌಲ್ಯಗಳೊಂದಿಗೆ ಅಕ್ಷರಾಭ್ಯಾಸ ಮಾಡಿಸುವ‌ ಮೂಲಕ ಮಕ್ಕಳಲ್ಲಿ ಸಂಸ್ಕಾರಗಳನ್ನು ಬಿತ್ತುವ ಕಾರ್ಯವು ಶುಭಾರಂಭವಾಗಿದೆ’ ಎಂದು ತಿಳಿಸಿದರು.

‘ತಾಯಂದಿರು ಮಕ್ಕಳನ್ನು ಅತಿಯಾದ ಮುದ್ದಾಗಿ ಬೆಳೆಸುವ ಮೂಲಕ ದುರ್ವರ್ತನೆಗೆ ದೂಡಬೇಡಿ. ಸೌಹಾರ್ದ ಬೆರೆಯುವ ಸದ್ಭಾವನೆಗಳನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ಮಾಡಿ. ಭಾರತದ ಮಹಾಕಾವ್ಯಗಳು ಮತ್ತು ಪುರಾಣಗಳು ಸತ್ಚಾರಿತ್ರ್ಯವನ್ನು ಬೋಧಿಸಿ ವಿಶ್ವದ ಗಮನ ಸೆಳೆದಿದೆ. ಈ ನಿಟ್ಟಿನಲ್ಲಿ ನೀವು ಮಕ್ಕಳಿಗೆ ಕೊಡುವ ಶ್ರೇಷ್ಠ ಸಂಸ್ಕಾರಗಳು ನಿಮ್ಮ ಮಗುವನ್ನು ರಾಮನಂತೆ ಪುರುಷೋತ್ತಮನಾಗಿ ಮಾಡಲಿ’ ಎಂದರು.

ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿ ಎ.ಟಿ.ಶಿವರಾಮು ಮಾತನಾಡಿ, ‘ನಮ್ಮ ಪೂರ್ವಜರು ಹೇಳಿದ ಅನುಭವದ ನುಡಿಯಾದ ಮೂರು ವರ್ಷ ಕಲಿತದ್ದು ನೂರು ವರ್ಷದವರೆಗೂ ಎಂಬ ಮಾತು ಎಂದಿಗೂ ಜನಜನಿತವಾಗಿದೆ. ಜೊತೆಗೆ ಮಗುವಿನ ಬುದ್ಧಿಶಕ್ತಿ ಮತ್ತು ಮಾನಸಿಕ ಸಾಮರ್ಥ್ಯವನ್ನು ಅರಿತು ಕಲಿಸುವ ಜ್ಞಾನ ಸಮಾಜದ ಬೇರು’ ಎಂದರು.

ವಿಶ್ವವಿದ್ಯಾಲಯದ ಆಡಳಿತ ಮತ್ತು ಶೈಕ್ಷಣಿಕ ಸಲಹೆಗಾರ ಇ.ಎಸ್. ಚಕ್ರವರ್ತಿ, ಶೈಕ್ಷಣಿಕ ವಿಭಾಗದ ಡೀನ್ ಬಿ.ರಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಾಸ್ತ್ರೀಯ ನೃತ್ಯ ಮತ್ತು ಗಾಯನಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. 130 ಮಕ್ಕಳಿಗೆ ಪೋಷಕರ ಸಮ್ಮುಖದಲ್ಲಿ ಅಕ್ಷರಭ್ಯಾಸ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜಿಎಸ್ ಮಾಡೆಲ್ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲ ವಿ.ಪುಟ್ಟಸ್ವಾಮಿ, ಪಿಯು ಕಾಲೇಜಿನ ಪ್ರಾಂಶುಪಾಲೆ ಟಿ.ಎನ್.ಶಿಲ್ಪಾ, ಸಿ.ದರ್ಶಿನಿ, ಆರೋಕಿಯ ಸಾಮಿ, ಸಪ್ನಾ ಸಜೀವನ್, ಗಾಯತ್ರಿ, ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.

ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಬಿ.ಜಿ.ಎಸ್ ಮಾಡೆಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‌ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.
ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಬಿ.ಜಿ.ಎಸ್ ಮಾಡೆಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‌ಜ್ಞಾನಾಂಕುರ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT