ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ ತಾಲ್ಲೂಕಿಗೆ ಸಂಸದೆ ಸುಮಲತಾ ಭೇಟಿ ಅ.9ಕ್ಕೆ

Published 7 ಅಕ್ಟೋಬರ್ 2023, 12:35 IST
Last Updated 7 ಅಕ್ಟೋಬರ್ 2023, 12:35 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಂಸದೆ ಸುಮಲತಾ ಅಂಬರೀಶ್ ಅ.9ರ ಸೋಮವಾರ ಪ್ರವಾಸ ಕೈಗೊಳ್ಳಲಿದ್ದಾರೆ.

ಸೋಮವಾರ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಸಂಸದರ ನಿಧಿ ಯೋಜನೆಯಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ, 2023-24ನೇ ಸಾಲಿನ ಸಂಸದರ ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿಕೊಂಡಿರುವ ತಾಲ್ಲೂಕಿನ ನಾಗೇಗೌಡನದೊಡ್ಡಿಯಲ್ಲಿ ಗ್ರಾಮದ ಅಭಿವೃದ್ಧಿ ಕುರಿತು ಸಭೆ ಹಾಗೂ ತಾಲ್ಲೂಕಿನ ಬಾಚನಹಳ್ಳಿ ಹಾಗೂ ನೆಟ್ಕಲ್ ಗ್ರಾಮಗಳಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು.

ರಾವಣಿ ಗ್ರಾಮದ ಮಹಾಲಿಂಗೇಶ್ವರಸ್ವಾಮಿ ದೇವಸ್ಥಾನದ ಬಳಿ ಸಂಸದರ ನಿಧಿ ಯೋಜನೆಯಡಿ ಅಶ್ವತ್ಥಕಟ್ಟೆ ಮತ್ತು ರಸ್ತೆ ಅಭಿವೃದ್ಧಿ ಹಾಗೂ ಪಟ್ಟಣದ ಕೊಳ್ಳೇಗಾಲ-ಮದ್ದೂರು ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT