ಶನಿವಾರ, ಮಾರ್ಚ್ 25, 2023
28 °C

ಗಣಿಪ್ರದೇಶಕ್ಕೆ ಸುಮಲತಾ ಭೇಟಿ: ಸಂಸದೆಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮಂಡ್ಯ: ಗಣಿ ಪ್ರದೇಶಕ್ಕೆ ಭೇಟಿ ನೀಡಿದ ಸಂಸದೆ ಸುಮಲತಾ ಅವರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ನೀವು ಬರೀ ಚನ್ನಪಟ್ಟಣಕ್ಕೆ ಶಾಸಕ, ನಾನು ಮಂಡ್ಯ ಸಂಸದೆ. ನನ್ನ ಕೆಲಕ್ಕೆ ಅಡ್ಡಿ ಮಾಡಬೇಡಿ ಎಂದು ಆಗ್ರಹಿಸಿದರು.

ಸಿನಿಮಾದವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಗಣಿಗಾರಿಕೆ ಪ್ರದೇಶಕ್ಕೆ ಹಲವು ಬಾರಿ ಭೇಟಿ ನೀಡಿದ್ದೇನೆ‌, ಇದೇ ಮೊದಲಲ್ಲ. ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ಗೆ ಧಕ್ಕೆಯಾಗಿದೆ. ಇದರ ವಿರುದ್ಧ ಹೋರಾಡುವೆ. ನನಗೆ ಜನಬೆಂಬಲ ಇದೆ. ಜೆಡಿಎಸ್ ಶಾಸಕರ  ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸುಮಲತಾ ತಿಳಿಸಿದ್ದಾರೆ.

ಸುಮಲತಾ ಬಂಧನಕ್ಕೆ ಒತ್ತಾಯ

ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎಂದು ಹೇಳಿ ರೈತರಲ್ಲಿ ಆತಂಕ ಮೂಡಿಸುತ್ತಿರುವ ಸಂಸದೆ ಸುಮಲತಾ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು