ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೋ ಚಾಲಕರ ಸೇವೆ ಅಪಾರ: ಎಂ.ಎಸ್.ಮಹದೇವ್

Published 29 ಮೇ 2023, 15:25 IST
Last Updated 29 ಮೇ 2023, 15:25 IST
ಅಕ್ಷರ ಗಾತ್ರ

ಮಳವಳ್ಳಿ: ದಿನದ 24 ಗಂಟೆಯೂ ಗ್ರಾಹಕರ ಸೇವೆಯಲ್ಲಿ ತೊಡಗಿರುವ ಆಟೋ ರಿಕ್ಷಾ ಚಾಲಕರ ಸೇವೆ ಅನನ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಎಸ್.ಮಹದೇವ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗ ಶಂಕರ್ ನಾಗ್ ಆಟೋ ಚಾಲಕರ ಸಂಘದ ಸರ್.ಎಂ.ವಿಶ್ವೇಶ್ವರಯ್ಯ ಆಟೋ ನಿಲ್ದಾಣವನ್ನು ಉದ್ಘಾಟಿಸಿ, ನಟ ದಿ.ಅಂಬರೀಷ್‌ ಅವರ ಜನ್ಮದಿನಾಚರಣೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಪ್ರಾಮಾಣಿಕ ಸೇವಾ ಮನೋಭಾವದಿಂದ ಕೆಲಸ ಮಾಡುವ ಪ್ರತಿಯೊಬ್ಬರ ಜೀವನ ಸುಂದರವಾಗಿರುತ್ತದೆ. ಆಟೋ ನಿಲ್ದಾಣದ ನಿರ್ಮಾಣಕ್ಕೆ ಜಾಗ ನೀಡಲಾಗಿದೆ.  ಅವರ ಸೇವೆಗೆ ಬೆಲೆ ಕಟ್ಟಲು ಆಗುವುದಿಲ್ಲ ಎಂದು ಹೇಳಿದರು.

ಮುಖಂಡ ಪೊತ್ತಂಡೆ ನಾಗರಾಜು ಮಾತನಾಡಿ, ಈ ಆಟೋ ನಿಲ್ದಾಣವನ್ನು ಪುರಸಭೆಯಲ್ಲಿ ಅನುಮೋದಿಸುವ ನಿಟ್ಟಿನಲ್ಲಿ  ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು.  ದಿ.ಅಂಬರೀಶ್ ಅವರು ಜನಮನದಲ್ಲಿ ಅಮರ ಎಂದು ಬಣ್ಣಿಸಿದರು.

ಪುರಸಭೆ ಸದಸ್ಯರಾದ ಪುಟ್ಟಸ್ವಾಮಿ, ಎಂ.ಎನ್.ಕೃಷ್ಣ, ಮುಖಂಡ ಅಂಕನಾಥ್, ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT