ಶ್ರೀರಂಗಪಟ್ಟಣ: ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ತನ್ನ ಸ್ನೇಹಿತನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಬೆಳಗೊಳ ಗ್ರಾಮದ ಕೋಟೆಮಾಳ ಬಡಾವಣೆ ನಿವಾಸಿ ಮೋಹನಕುಮಾರ್ (44) ಎಂಬಾತನನ್ನು ಆತನ ಸ್ನೇಹಿತ ಬೆಳಗೊಳ ಗ್ರಾಮದವನೇ ಆದ ರವಿಚಂದ್ರ ಎಂಬಾತ ಹತ್ಯೆ ಮಾಡಿದ್ದಾನೆ. ಮದ್ಯ ಸೇವಿಸುವ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರವಿಚಂದ್ರ ಚೂರಿಯಿಂದ ಮೋಹಕುಮಾರನ ಕತ್ತು ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮೋಹನಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗುರುವಾರ ಬಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳೀಯರ ನೆರವಿನಿಂದ ಪೊಲೀಸರು ಘಟೆನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೆಆರ್ಎಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.