ಹಲಗೂರು: ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ಸುಳಿಗೆ ಸಿಲುಕಿ ಬೆಂಗಳೂರು ಲಿಂಗರಾಜಪುರ ಬಡಾವಣೆ ನಿವಾಸಿ ಶಂಕರ್ ಅವರ ಪುತ್ರ ಅಭಿಷೇಕ್ (21) ಮೃತಪಟ್ಟರು.
ಎಂಜಿನಿಯರಿಂಗ್ ಪದವೀಧರನಾಗಿದ್ದ ಈತ ತನ್ನ ಮೂವರು ಸ್ನೇಹಿತರೊಂದಿಗೆ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು. ಬುಧವಾರ ಮಧ್ಯಾಹ್ನ ಕಾವೇರಿ ನದಿಯಲ್ಲಿ ಈಜಲು ಇಳಿದಾಗ ನೀರಿನ ಸುಳಿಗೆ ಸಿಲುಕಿ ಅಭಿಷೇಕ್ ಮೃತಪಟ್ಟಿದ್ದಾನೆ.
ನುರಿತ ಈಜುಗಾರರ ಸಹಾಯದಿಂದ ಗುರುವಾರ ಮಧ್ಯಾಹ್ನ ಮೃತದೇಹವನ್ನು ನದಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.