ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು- ಬೆಂಗಳೂರು ಹೆದ್ದಾರಿ |ಮದ್ಯ ಸೇವಿಸಿ ಕಾರು ಚಾಲನೆ: ₹69 ಸಾವಿರ ದಂಡ

Published 22 ಮಾರ್ಚ್ 2024, 13:52 IST
Last Updated 22 ಮಾರ್ಚ್ 2024, 13:52 IST
ಅಕ್ಷರ ಗಾತ್ರ

ಮದ್ದೂರು: ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯವು ₹69 ಸಾವಿರ ದಂಡ ವಿಧಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯನಿಗೆ ನ್ಯಾಯಾಲಯ ದಂಡ ವಿಧಿಸಿದೆ.

ತಾಲ್ಲೂಕಿನ ನಿಡಘಟ್ಟ ಗ್ರಾಮದ ಬಳಿ ಭಾನುವಾರ ಸಂಜೆ ಸಂಚಾರ ಪೊಲೀಸರು ಹೆದ್ದಾರಿಯಲ್ಲಿ ವಾಹನ ತಪಾಸಣೆ ಕಾರ್ಯ ನಡೆಸುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರು ಕಡೆಗೆ ಎರ್ಟಿಗಾ ಕಾರಿನಲ್ಲಿ ಚಾಲಕ ಪಾನಮತ್ತನಾಗಿ ಅತೀ ವೇಗವಾಗಿ ಮತ್ತು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತ ಇತರೆ ವಾಹನ ಚಾಲಕರಿಗೆ ಆತಂಕ ಸೃಷ್ಟಿಸುತ್ತಿರುವುದನ್ನು ಗಮನಿಸಿ ತಡೆದು ಪರಿಶೀಲನೆ ನಡೆಸಿದ್ದರು.

ಈ ವೇಳೆ ಚಾಲಕ ಧನಂಜಯ ಹಾಗೂ ಕಾರಿನಲ್ಲಿದ್ದ ಇತರೆ ಐದು ಮಂದಿಯೂ ಮದ್ಯಪಾನ ಮಾಡಿದ್ದು, ತಪಾಸಣೆಗೂ ಸಹಕರಿಸದೆ ಸಂಚಾರ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ದೂರಿನ ಮೇರೆಗೆ ಮದ್ದೂರು ಸಂಚಾರ ಠಾಣೆ ಪೋಲೀಸರು ಕಾರನ್ನು ವಶಕ್ಕೆ ತೆಗೆದುಕೊಂಡು ಚಾಲಕ ಹಾಗೂ ಆತನ ಸ್ನೇಹಿತರ ವಿರುದ್ಧ ಸೆಕ್ಷನ್ 185, 184, 188, 179 (1) (2), 177 ಪ್ರಕರಣ ದಾಖಲಿಸಿದ್ದರು.

ಗುರುವಾರ ಬೆಳಿಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಿಯಾಂಕಾ ಅವರು ಕಾರು ಚಾಲಕ ಧನಂಜಯ ಹಾಗೂ ಸ್ನೇಹಿತರಿಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT