ನಾಗಮಂಗಲ: ‘ಮೈಸೂರಿನ ಅಭಿವೃದ್ಧಿಯ ವಿಚಾರವಾಗಿ ಹಲವು ಚಿಂತನೆಗಳಿದ್ದು, ಅಧಿಕಾರ ಸಿಕ್ಕರೆ ದಕ್ಷಿಣ ಭಾರತದ ಪ್ರವಾಸೋದ್ಯಮದ ಕೇಂದ್ರಬಿಂದುವಾಗಿ ಮೈಸೂರನ್ನು ರೂಪಿಸುತ್ತೇನೆ. ಆರ್ಥಿಕ ನೆಲೆಗಟ್ಟು ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತೇನೆ’ ಎಂದು ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭಾನುವಾರ ಬೆಳಿಗ್ಗೆ ಭೇಟಿ ನೀಡಿದ ಅವರು ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಶ್ರೀಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶ್ರೀಗಳಿಂದ ಆಶೀರ್ವಾದ ಪಡೆದರು. ಕೆಲ ಸಮಯ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು. ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆದರು. ಕ್ಷೇತ್ರಾಧಿದೇವತೆಗಳ ದರ್ಶನವನ್ನು ಪಡೆದು ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಿಂದ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆಯಾದ ನಂತರ ಕೊಡಗು ಮತ್ತು ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಿದ್ದು, ಅವುಗಳನ್ನು ಮುಗಿಸಿ ಇಂದು ಶ್ರೀಕಾಲಭೈರವೇಶ್ವರ ಸ್ವಾಮಿಯ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಮೈಸೂರು ಮತ್ತು ಕೊಡಗು ಕ್ಷೇತ್ರ ಪರಿಸರದ ಕಾಳಜಿ ಇರುವಂಥ ಕ್ಷೇತ್ರವಾಗಿದ್ದು, ಅವುಗಳ ಎಲ್ಲಾ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಎರಡು ಕ್ಷೇತ್ರಗಳೂ ಪ್ರವಾಸೋದ್ಯಮದಲ್ಲಿ ಒಂದನ್ನೊಂದು ಅವಲಂಬಿಸಿವೆ. ಸರಿಯಾದ ರೀತಿಯಲ್ಲಿ ಅಭಿವೃದ್ಧಿ ಮಾಡಿದರೆ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಸಾಧ್ಯವಿದೆ. ಟಿಕೆಟ್ ಸಿಕ್ಕಿದ್ದು, ಮೈಸೂರಿನ ಮತ್ತು ಕೊಡಗಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಾದ್ಯಂತ ಭೇಟಿ ನೀಡುತ್ತೇನೆ. ಜೊತೆಗೆ ಹಾಲಿ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಕೂಡ ಬೆಂಬಲ ನೀಡುವ ಭರವಸೆ ನೀಡಿ ಮಾತನಾಡಿದ್ದಾರೆ. ಅವರ ಸಲಹೆ ಸಹಕಾರವನ್ನು ಪಡೆದುಕೊಳ್ಳುತ್ತೇನೆ ಎಂದರು.

ಆದಿಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ, ಬಿಜೆಪಿ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.