ಮಂಡ್ಯ: ‘ಮೈಷುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದ ನಾಗರಾಜಪ್ಪ ಅವರ ಅವಧಿಯಲ್ಲಿ ನಡೆದಿದ್ದ ನೂರಾರು ಕೋಟಿ ರೂಪಾಯಿ ಅವ್ಯವಹಾರ ಪ್ರಕರಣದಲ್ಲಿ ಚರ- ಸ್ಥಿರಾಸ್ತಿ ಜಪ್ತಿಗೆ ಲೋಕಾಯುಕ್ತರು ಆದೇಶಿಸಿದ್ದರು. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯು ಈಗ ತೆರವುಗೊಂಡಿದ್ದು, ಆದೇಶ ಪ್ರತಿ ಕೈಸೇರಿದ ಬಳಿಕ ಆಸ್ತಿಯನ್ನು ವಶಪಡಿಸಿಕೊಳ್ಳಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಖಾನೆ ಅಧ್ಯಕ್ಷ ಸಿ.ಡಿ. ಗಂಗಾಧರ ಹೇಳಿದರು.

‘ನಾಗರಾಜಪ್ಪ ಮೇಲಿನ ಅವ್ಯವಹಾರದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಉಂಟಾಗಿರುವ ನಷ್ಟವನ್ನು ಮರುಪಾವತಿಸಿಕೊಳ್ಳುವಂತೆ ಸೂಚಿಸಿತ್ತು. ಅದರಂತೆ ₹127 ಕೋಟಿ ವಸೂಲಿಗೆ ಉಪ ಲೋಕಾಯುಕ್ತರಾಗಿದ್ದ ಬಿ.ಎಸ್. ಪಾಟೀಲ್ ಅವರು 2022ರಲ್ಲಿ ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ನಾಗರಾಜಪ್ಪ ಅವರು ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಬಾಯ್ಲಿಂಗ್ ಹೌಸ್ಗೆ ಅಗತ್ಯವಿರುವ ₹60 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು, ಆ ಹಣವನ್ನು ತಂದು ಕಾರ್ಖಾನೆ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

‘2024ರ ಡಿಸೆಂಬರ್ನಲ್ಲಿ ಮಂಡ್ಯದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೈಷುಗರ್ ವತಿಯಿಂದ ಮಾಧ್ಯಮಗಳಿಗೆ ಜಾಹೀರಾತು ನೀಡಿದ ವಿಷಯದಲ್ಲಿ ಯಾವುದೇ ಲೋಪವಾಗಿಲ್ಲ. ಆದರೂ ಈ ಬಗ್ಗೆ ಭಿನ್ನಾಭಿಪ್ರಾಯಗಳು ಬಂದಿರುವುದು ಮನಸ್ಸಿಗೆ ನೋವುಂಟು ಮಾಡಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಮುಖಂಡರಾದ ಶ್ರೀಧರ್, ಸಿ.ಎಂ.ದ್ಯಾವಪ್ಪ, ವೀಣಾ, ರಾಮಕೃಷ್ಣ, ನಾಗರಾಜು, ಪುಟ್ಟರಾಮು ಇದ್ದರು.

ಕೇಂದ್ರ ಸಚಿವರ ಅಸಹಕಾರ: ಆರೋಪ

‘ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೈಷುಗರ್ ಕಾರ್ಖಾನೆ ಅಭಿವೃದ್ಧಿ ಹಾಗೂ ಮೈಷುಗರ್ ಶಾಲೆಯ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಲು ಸಾಧ್ಯವಾಗುವುದಿಲ್ಲವೆಂದು ಕೈಚೆಲ್ಲಿದ್ದಾರೆ. ಹಣ ಒದಗಿಸಲು ಸಾಧ್ಯವಾಗದಿರುವ ಬಗ್ಗೆ ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಾವೇ ಕಾರ್ಖಾನೆ ಮತ್ತು ಶಾಲೆಯ ಅಭಿವೃದ್ಧಿಗೆ ಹಣ ಹೊಂದಿಸಿಕೊಡುವ ಬಗ್ಗೆ ಸಚಿವರು ಶಾಸಕರೊಂದಿಗೆ ಕುಳಿತು ಚರ್ಚಿಸಿ ಸರ್ಕಾರದ ಗಮನಸೆಳೆಯಲಾಗುವುದು’ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.