ಶನಿವಾರ, ಅಕ್ಟೋಬರ್ 16, 2021
29 °C

ಮಂಡ್ಯ: ಮೈಷುಗರ್‌ ಸಭೆ; ಶೀಘ್ರ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಮೈಷುಗರ್ ಕಾರ್ಖಾನೆ ವಿಚಾರದಲ್ಲಿ ಆಡಳಿತಾತ್ಮಕ ವಿಚಾರಗಳು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿವೆ. ಈ ಬಗ್ಗೆ ಸಭೆ ಸದ್ಯದಲ್ಲೇ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವಕೋಟ ಶ್ರೀನಿವಾಸಪೂಜಾರಿ ಹೇಳಿದರು.

ನಗರದ ಸರ್‌ ಎಂ.ವಿ.ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಹಯೋಗದಲ್ಲಿ ನಡೆಯುತ್ತಿರುವ ಧರಣಿ ಭಾನುವಾರಕ್ಕೆ 20ನೇ ದಿನ ತಲುಪಿದ್ದು, ಧರಣಿ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಅವರು ಮಾತನಾಡಿದರು.

ಸದನದಲ್ಲಿ ಜಿಲ್ಲೆಯ ಶಾಸಕರು ಮೈಷುಗರ್ ಕಾರ್ಖಾನೆ ವಿಚಾರವಾಗಿ ಗಮನ ಸೆಳೆದಿದ್ದಾರೆ. ಮೈಷುಗರ್ ಕಾರ್ಖಾನೆಯಿಂದಾಗುವ ಸಾಧಕ ಬಾಧಕಗಳನ್ನು ಸರ್ಕಾರ ಆಲಿಸಿದೆ. ರೈತರಿಗೆ ಒಳಿತಾಗುವ ದೃಷ್ಟಿಯಲ್ಲಿ ಸರ್ಕಾರ ನಡೆದುಕೊಳ್ಳಲಿದೆ. ಮುಖ್ಯಮಂತ್ರಿ ಅವರ ಗಮನಕ್ಕೂ ತಂದು ಸಭೆಯನ್ನು ಬೇಗ ನಡೆಸುವಂತೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಡಿ.ಸಿ.ತಮ್ಮಣ್ಣ, ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ನಗರಸಭೆ ಮಾಜಿ ಅಧ್ಯಕ್ಷೆ ಅಂಬುಜಮ್ಮ, ರೈತ ಸಂಘ (ಮೂಲ ಸಂಘಟನೆ)ದ ಕಾರ್ಯಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಕನ್ನಡ ಸೇನೆ ಮಂಜುನಾಥ್, ಸಿಐಟಿಯುನ ಸಿ.ಕುಮಾರಿ, ಟಿ.ಯಶವಂತ್, ಡಿಎಸ್‌ಎಸ್‌ ರಾಜ್ಯ ಸಂಚಾಲಕ ಎಂ.ಬಿ.ಶ್ರೀನಿವಾಸ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು