ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಷುಗರ್‌ ; ಬಾಕಿ ಹಣ ಬಿಡುಗಡೆಗೆ ಒತ್ತಾಯ

Published 7 ಮೇ 2023, 7:10 IST
Last Updated 7 ಮೇ 2023, 7:10 IST
ಅಕ್ಷರ ಗಾತ್ರ

ಮಂಡ್ಯ: ‘ಜೂನ್ ಮೊದಲ ವಾರದಲ್ಲಿ ಮೈಷುಗರ್ ಕಾರ್ಖಾನೆ ಕಬ್ಬು ಅರೆಯಲು ಬಿರುಸಿನ ಸಿದ್ಧತೆ ನಡೆಸುತ್ತಿದ್ದು, ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಉಳಿಕೆ ಹಣ ₹17.42 ಕೋಟಿ ಬಾಕಿ ಹಣ ಬಿಡುಗಡೆ ಮಾಡಬೇಕು’ ಎಂದು ರೈತ ಹಿತರಕ್ಷಣಾ ಸಮಿತಿಯ ಸುನಂದಾ ಜಯರಾಂ ಒತ್ತಾಯಿಸಿದರು.

ಸಮಿತಿ ಸದಸ್ಯರು ಶನಿವಾರ ಕಾರ್ಖಾನೆಗೆ ಭೇಟಿ ನೀಡಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪ್ರಧಾನ ವ್ಯವಸ್ಥಾಪಕರನ್ನು ಭೇಟಿಮಾಡಿ ಮಾತನಾಡಿದರು.

‘ಸರ್ಕಾರ ಇದೂವರೆಗೆ ನೀಡಿರುವ ಹಣದ ಖರ್ಚಿನ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಉಳಿಕೆ ಬಾಕಿ ₹17.42 ಕೋಟಿ ಬಿಡುಗಡೆಗೆ ಒತ್ತಾಯ ಮಾಡಲಾಗಿದೆ. ತಕ್ಷಣ ಕಾರ್ಖಾನೆಯನ್ನು ಜೂನ್ ಮೊದಲ ವಾರ ಪ್ರಾರಂಭ ಮಾಡಬೇಕಾಗಿದ್ದು, ಅಷ್ಟರೊಳಗೆ ಸರ್ಕಾರ ಬಾಕಿ ಹಣ ಬಿಡುಗಡೆಗೆ ಮಾಡಲು ಸರ್ಕಾರಕ್ಕೆ ಸಮಿತಿ ಪರವಾಗಿ ಒತ್ತಾಯಿಸುತ್ತಿದ್ದೇನೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಇಂಡುವಾಳು ಚಂದ್ರಶೇಖರ್, ಶಂಭೂನಹಳ್ಳಿ ಕೃಷ್ಣ, ಕೀಲಾರ ಸೋಮಶೇಖರ್, ಮುದ್ದೇಗೌಡ, ಪಣಕನಹಳ್ಳಿ ಬೋರಲಿಂಗೇಗೌಡ, ನಾಗೇಂದ್ರ, ಹುಲಿವಾನ ಕಾಳೇಗೌಡ, ದೊಡ್ಡಗರುಡನಹಳ್ಳಿ ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT