ನಾಗಮಂಗಲ: ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿರುಮಲಾಪುರ ಗೇಟ್ ಬಳಿ ಮಂಗಳವಾರ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಗೆ ಮಗುಚಿಬಿದ್ದು, ಹಾಸನ ಜಿಲ್ಲೆಯ ಆಲೂರಿನ ನಿವೃತ್ತ ಶಿಕ್ಷಕ ಚಂದ್ರಶೆಟ್ಟಿ(75) ಮೃತಪಟ್ಟಿದ್ದಾರೆ.
ಚಂದ್ರಶೆಟ್ಟಿ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿಗೆ ತೆರಳುತ್ತಿದ್ದಾಗ ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಅವರನ್ನುಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಬೆಳ್ಳೂರು ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣ ದಾಖಲಾಗಿದೆ.