ಮಂಡ್ಯ: ನಾಗಮಂಗಲದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್ ಎ.ಆರ್. ಅವರನ್ನು ಅಮಾನತು ಮಾಡಲಾಗಿದೆ.
ಮಂಡ್ಯ ಸಿ.ಇ.ಎನ್ ಪೊಲೀಸ್ ಠಾಣೆಯ ಡಿವೈಎಸ್ಪಿ ಶಿವಮೂರ್ತಿ ಜಿ.ಆರ್. ಅವರಿಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಗಲಭೆಗೆ ಸಂಬಂಧಿಸಿದಂತೆ ಈಚೆಗೆ ನಾಗಮಂಗಲ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.