ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ: ಬಾಲಗಂಗಾಧರನಾಥ ಶ್ರೀಗಳ 50ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ

Published : 25 ಸೆಪ್ಟೆಂಬರ್ 2024, 13:46 IST
Last Updated : 25 ಸೆಪ್ಟೆಂಬರ್ 2024, 13:46 IST
ಫಾಲೋ ಮಾಡಿ
Comments

ನಾಗಮಂಗಲ (ಮಂಡ್ಯ ಜಿಲ್ಲೆ): ‘ಸಂತ ಶ್ರೇಷ್ಠ, ಮಾತೃ ಹೃದಯಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ದೂರದರ್ಶಿತ್ವ ಮತ್ತು ಜ್ಞಾನದ ಫಲವಾಗಿ ಆದಿಚುಂಚನಗಿರಿ ಮಠದಿಂದ ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸಾಧ್ಯವಾಗಿದೆ’ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. 

ತಾಲ್ಲೂಕಿನ ಆದಿಚುಂಚನಗಿರಿ ಮಠದ ಬಿ.ಜಿ.ಎಸ್ ಸಭಾಂಗದಲ್ಲಿ ಬುಧವಾರ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಅವರ 50ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ, ಗುರು ಸಂಸ್ಮರಣೋತ್ಸವ ಮತ್ತು ರಾಜ್ಯಮಟ್ಟದ 45ನೇ ಕಾಲಭೈರವೇಶ್ವರ ಜಾನಪದ ಕಲಾ ಮೇಳದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾಮೀಜಿ ಅವರು ಆಧುನಿಕ ಸೌಕರ್ಯಗಳುಳ್ಳ ಸುಸಜ್ಜಿತ ಆಸ್ಪತ್ರೆಗಳನ್ನು ಸ್ಥಾಪಿಸಿರುವುದು ಸಮಾಜದ ಮೇಲೆ ಅವರಿಗಿದ್ದ ಅಗಾಧವಾದ ಪ್ರೀತಿ, ಕಾಳಜಿಯನ್ನು ತೋರಿಸುತ್ತದೆ. ಆಧ್ಯಾತ್ಮಿಕ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ಕೆಲಸವನ್ನು ಮಾಡುತ್ತಲೇ ಎಲ್ಲವನ್ನೂ ಸಮರ್ಥವಾಗಿ ನಿರ್ಮಲಾನಂದನಾಥ ಸ್ವಾಮೀಜಿ ನಿರ್ವಹಿಸುತ್ತಿದ್ದಾರೆ. ಸನಾತನ ಸಂಸ್ಕೃತಿಯನ್ನು ಪಸರಿಸುವ ಜಾತ್ಯತೀತ ಮಠವಾಗಿ ವಿಶ್ವದೆಲ್ಲೆಡೆ ಹೆಸರಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರದುರ್ಗದ ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ‘ಬಾಲಗಂಗಾಧರನಾಥ ಸ್ವಾಮೀಜಿ ಪೀಠವನ್ನು ಅಲಂಕರಿಸಿ ಐವತ್ತು ವರ್ಷಗಳ ಸುವರ್ಣ ಸಂಭ್ರಮವನ್ನು ಇಂದು ಆಚರಿಸುತ್ತಿದ್ದೇವೆ. ಅನ್ನ, ಅಕ್ಷರ, ಆರೋಗ್ಯದೊಂದಿಗೆ ಸಸ್ಯ ಸಂಪತ್ತಿನ ಸಂವರ್ಧನೆಗಾಗಿ ಐದು ಕೋಟಿಗೂ ಹೆಚ್ಚಿನ ಸಂಖ್ಯೆಯ ಗಿಡ ನೆಟ್ಟು ಬೆಳೆಸುವ ಸಂಕಲ್ಪ ತೊಟ್ಟು, ಬೆಳೆಸುವ ಕೆಲಸವನ್ನು ಮಾಡಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ. ಜೊತೆಗೆ ಗೋಸಂರಕ್ಷಣೆ ಮಾಡುವ ಜೊತೆಗೆ ಗೋ ಉತ್ಪನ್ನಗಳ ಪುನರ್ಜೀವನಗೊಳಿಸುವ ಕೆಲಸವನ್ನು ಮಾಡುವ ಮೂಲಕ ನಾಡಿನ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದರು.

ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ‌ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪುಟ್ಟರಾಜು, ಶಾಖಾ ಮಠಗಳ ಪುರುಷೋತ್ತಮಾನಂದನಾಥ ಸ್ವಾಮೀಜಿ, ಪ್ರಕಾಶನಾಥ ಸ್ವಾಮೀಜಿ, ಅನ್ನದಾನೇಶ್ವರ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ, ಶಂಭೂನಾಥ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT