ನಾಗಮಂಗಲ: ‘ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಶ್ರಮಿಕರ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ದೇಶ ಕಟ್ಟುವ ಶಕ್ತಿಗಳನ್ನಾಗಿ ರೂಪಿಸಬೇಕೆಂಬ ಉದ್ದೇಶದಿಂದ ಶ್ರಮಿಕ ವಸತಿ ಶಾಲೆ ನಿರ್ಮಿಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ತಾಲ್ಲೂಕಿನ ಉಯ್ಯನಹಳ್ಳಿ ಗ್ರಾಮದ ಹೊರವಲಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ₹35 ಕೋಟಿ ವೆಚ್ಚದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಹಳ್ಳಿಗಾಡಿನ ಎಲ್ಲ ವರ್ಗದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಬೇಕೆಂಬುದು ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ತಾಲೂಕಿನಲ್ಲಿ ನಾನು ಶಾಸಕ ಮತ್ತು ಸಚಿವನಾದ ಅವಧಿಯಲ್ಲಿ ಹಲವಾರು ಸರ್ಕಾರಿ ಶಾಲಾ ಕಾಲೇಜುಗಳು, ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್ಗಳು ಹಾಗೂ ವಿವಿಧ ವಸತಿ ಶಾಲೆಗಳನ್ನು ಮಂಜೂರು ಮಾಡಿಸಿ ಸುಸಜ್ಜಿತವಾದ ಕಟ್ಟಡಗಳನ್ನೂ ನಿರ್ಮಿಸಲಾಗಿದೆ’ ಎಂದು ತಿಳಿಸಿದರು.

‘ತಾಲ್ಲೂಕು ಸೇರಿದಂತೆ ಜಿಲ್ಲೆಯ ಕಾರ್ಮಿಕರ ಮಕ್ಕಳಿಗಾಗಿಯೇ ಉಯ್ಯನಹಳ್ಳಿ ಗ್ರಾಮದ ಹೊರವಲಯದಲ್ಲಿರುವ 7 ಎಕರೆ ವಿಸ್ತೀರ್ಣದಲ್ಲಿ ₹35 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಶ್ರಮಿಕ ವಸತಿ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ ಅರ್ಹ ಶ್ರಮಿಕರ ಮಕ್ಕಳು 6 ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಬಹುದಾಗಿದೆ’ ಎಂದರು.

ಕಟ್ಟಡ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ತಹಶೀಲ್ದಾರ್ ಜಿ.ಆದರ್ಶ, ತಾಲ್ಲೂಕು ಪಂಚಾಯಿತಿ ಇಒ ಸತೀಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತ, ತಾಲ್ಲೂಕು ಕಾರ್ಮಿಕ ನಿರೀಕ್ಷಕ ಶಿವಕುಮಾರ್, ಎಇಇ ಸಿದ್ದಪ್ಪ, ಮನ್ಮುಲ್ ನಿರ್ದೇಶಕ ಲಕ್ಷ್ಮೀನಾರಾಯಣ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-40-1173159973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.