ನಾಗಮಂಗಲ: ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು ಕೋಟಿ ಮೌಲ್ಯದ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿರುವ ಪ್ರಕರಣ ತನಿಖೆ ಹಂತದಲ್ಲಿರುವಾಗಲೇ ತಾಲ್ಲೂಕಿನಲ್ಲಿ ಮತ್ತೊಂದು ಭೂ ಕಬಳಿಕೆ ಪ್ರಕರಣ ಗರಿಗೆದರಿದೆ.

ತಾಲ್ಲೂಕಿನ ಬೆಳ್ಳೂರು ಹೋಬಳಿಯ ಕತ್ತರಗುಪ್ಪೆ ಗ್ರಾಮದ ಸರ್ವೆ ನಂ.19ರ ಸರ್ಕಾರಿ ಗೋಮಾಳದ ಭೂಮಿಯಲ್ಲಿ ಸ್ಥಳೀಯರಲ್ಲದ ವ್ಯಕ್ತಿಯೊಬ್ಬರು ಅಕ್ರಮವಾಗಿ ತಂತಿಬೇಲಿ ಹಾಕಿ ಶೆಡ್ ನಿರ್ಮಿಸಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟಿಸಿ ಸರ್ಕಾರಿ ಗೋಮಾಳದ ಭೂಮಿಯನ್ನು ರಕ್ಷಿಸುವಂತೆ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದರು.

ಕತ್ತರಗುಪ್ಪೆ ಗ್ರಾಮದ ಸರ್ವೆ ನಂ.19 ರಲ್ಲಿ ಒಟ್ಟು 60.3 ಎಕರೆ ಸರ್ಕಾರಿ ಗೋಮಾಳವಿದೆ. ಈ ಭೂಮಿಯಲ್ಲಿ ಜಮೀನು ಮಂಜೂರು ಮಾಡಿಕೊಡುವಂತೆ 1988-89ರಲ್ಲಿ ಬಗರ್ಹುಕುಂ ಸಾಗುವಳಿ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಸಿ ಗ್ರಾಮದ 20ಕ್ಕೂ ಹೆಚ್ಚು ರೈತರಿಗೆ ತಲಾ 2 ರಿಂದ 2.5 ಎಕರೆಯಂತೆ ಕಳೆದ 2022ರಲ್ಲಿ ಕಿಮ್ಮತ್ತು ಕಟ್ಟಿಸಿಕೊಂಡು ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಇದೇ ಸರ್ವೆ ನಂಬರ್ನ ಸರ್ಕಾರಿ ಗೋಮಾಳದಲ್ಲಿ ಯಾವುದೇ ದಾಖಲೆಗಳು ಇಲ್ಲದಿದ್ದರೂ ಸಹ ಸ್ಥಳೀಯರಲ್ಲದ ವ್ಯಕ್ತಿಯೊಬ್ಬರು 30 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ಅಕ್ರಮವಾಗಿ ತಂತಿ ಬೇಲಿ ಹಾಕಿ ಶೆಡ್ ನಿರ್ಮಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸ್ಥಳೀಯ ಸಾರ್ವಜನಿಕರ ದೂರಿನನ್ವಯ ತಹಶೀಲ್ದಾರ್ ಜಿ.ಆದರ್ಶ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ನಿಮಗೆ ಐದು ಎಕರೆ ಜಮೀನು ಮಂಜೂರಾಗಿದೆಯೇ ಎಂದು ಪ್ರಶ್ನಿಸಿ ಸೂಕ್ತ ದಾಖಲಾತಿಗಳಿದ್ದರೆ ಹಾಜರುಪಡಿಸುವಂತೆ ಸೂಚಿಸಿದರು.

ತೆರವು: ಕತ್ತರಗುಪ್ಪೆ ಗ್ರಾಮದ ಸರ್ವೆ ನಂ.19ರಲ್ಲಿ ನಮಗೆ 25 ಎಕರೆ ಭೂಮಿ ಮಂಜೂರಾಗಿದೆ ಎಂದು ತಹಶೀಲ್ದಾರ್ ಎದುರು ಮೊಂಡುವಾದ ಮಾಡುತ್ತಿದ್ದ ಮಹಿಳೆಯೊಬ್ಬರು ಯಾವುದೇ ದಾಖಲಾತಿಗಳನ್ನು ಒದಗಿಸಲಾಗದೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಮತ್ತು ತಂತಿ ಬೇಲಿಯನ್ನು ಪೊಲೀಸರ ನೆರವಿನೊಂದಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಸಂಪೂರ್ಣ ತೆರವುಗೊಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-40-2129811496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.