ನಾಗಮಂಗಲ: ‘ಜನಸಾಮಾನ್ಯರಿಗೆ ಮೂಲಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹೈಟೆಕ್ ಶೌಚಾಲಯ ನಿರ್ಮಿಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದ ಟಿ.ಮರಿಯಪ್ಪ ವೃತ್ತದ ಪ್ರಯಾಣಿಕರ ತಂಗುದಾಣದ ಹಿಂಭಾಗದಲ್ಲಿ ಸಾರ್ವಜನಿಕ ಖಾಸಗಿ ಪಾಲುದಾರಿಕೆ ಪದ್ಧತಿಯಲ್ಲಿ ಭರವಸೆ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ₹15 ಲಕ್ಷ ವೆಚ್ಚದ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೌಚಾಲಯ ಬಳಸಲು ಜನರು ಎಷ್ಟು ಹಣ ಪಾವತಿಸಬೇಕಾಗುತ್ತದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ದರ ನಿಗದಿಪಡಿಸಲಾಗುವುದು ಎಂದರು.

ಪಟ್ಟಣದ ಹೃದಯಭಾಗದಲ್ಲಿ ನಿರ್ಮಾಣಗೊಳ್ಳುವ ಈ ಶೌಚಾಲಯ ಇಡೀ ಪಟ್ಟಣಕ್ಕೆ ಆಕರ್ಷಣೆಯಾಗುವಂತಿರಬೇಕು. ಕಾಮಗಾರಿ ನಿರ್ವಹಿಸುವ ಏಜೆನ್ಸಿಯವರು ಮೂರು ತಿಂಗಳಲ್ಲಿ ಗುಣಮಟ್ಟದಿಂದ ಕೂಡಿರುವ ಹೈಟೆಕ್ ಶೌಚಾಲಯ ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಜಾಗದಲ್ಲಿರುವ ಪ್ರಯಾಣಿಕರ ತಂಗುದಾಣವನ್ನು ಸ್ಥಳಾಂತರಿಸುವ ಕುರಿತು ಸ್ಥಳೀಯ ಜನರಿಂದ ಅಭಿಪ್ರಾಯ ಸಂಗ್ರಹಿಸಿದರು.

ಟಿ.ಮರಿಯಪ್ಪ ವೃತ್ತದಲ್ಲಿ ಸಾರಿಗೆ ಮತ್ತು ಕೆಲ ಖಾಸಗಿ ಬಸ್ಗಳು ಬಹಳ ಹೊತ್ತು ನಿಲ್ಲುವುದರಿಂದ ಹೆದ್ದಾರಿಯ ವಾಹನಗಳ ಸಂಚಾರಕ್ಕೆ ಮತ್ತು ಪಾದಾಚಾರಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿಬರುತ್ತಿವೆ. ಹಾಗಾಗಿ ಈ ವೃತ್ತದಲ್ಲಿ ಯಾವುದೇ ಬಸ್ಗಳು ನಿಲ್ಲಬಾರದು, ಪ್ರಯಾಣಿಕರನ್ನು ಇಳಿಸಿ ಹತ್ತಿಸಿಕೊಂಡ ತಕ್ಷಣ ತೆರಳುವಂತೆ ಕ್ರಮವಹಿಸಬೇಕೆಂದು ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಗೆ ಸೂಚಿಸಿದರು.

ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ತಹಶೀಲ್ದಾರ್ ಜಿ.ಆದರ್ಶ, ತಾ.ಪಂ. ಇಒ ಬಿ.ಎಸ್.ಸತೀಶ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ತಿಮ್ಮಪ್ಪ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಫಣಿಕಿರಣ್, ರವಿಕಾಂತೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-855082509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.