ನಾಗಮಂಗಲ: ತಾಲ್ಲೂಕಿನಾದ್ಯಂತ ಗ್ರಾಮಗಳ ವ್ಯಾಪ್ತಿಯಲ್ಲಿರುವ ಸ್ಮಶಾನ ಭೂಮಿಯನ್ನು ಅಧಿಕಾರಿಗಳು ಗುರುತಿಸುವ ಜೊತೆಗೆ ಸ್ಮಶಾನ, ಗೋಕಟ್ಟೆ, ಗೋಮಾಳ, ಕೆರೆಕಟ್ಟೆಗಳ ಜಾಗವನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಅಣಕು ಶವಯಾತ್ರೆ ಮಾಡಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಟಿ.ಬಿ.ಬಡಾವಣೆಯಿಂದ ಕೆಆರ್ಎಸ್ ಪಕ್ಷದ ಸದಸ್ಯರು ಮಿನಿವಿಧಾನ ಸೌಧದವರೆಗೆ ತಮಟೆ ಚಳವಳಿ ಮತ್ತು ಅಣಕು ಶವಯಾತ್ರೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಕೆಆರ್ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ್ಗೌಡ ಮಾತನಾಡಿ, ತಾಲ್ಲೂಕಿನಲ್ಲಿರುವ ಸರ್ಕಾರಿ ಕೆರೆಕಟ್ಟೆಗಳು, ಗೋಮಾಳಗಳು, ಗೋಕಟ್ಟೆಗಳು, ಗುಂಡು ತೋಪುಗಳು ಸೇರಿ ಸ್ಮಶಾನಗಳನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದು, ಅದನ್ನು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತೆರವುಗೊಳಿಸಲು ಕ್ರಮವಹಿಸಬೇಕು. ತಾಲ್ಲೂಕು ಆಡಳಿತ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕ್ರಮವಹಿಸಬೇಕು ಇಲ್ಲದಿದ್ದರೆ ಬೃಹತ್ ಹೋರಾಟ ಮಾಡುತ್ತೇವೆ ಎಂದರು.

ಜೊತೆಗೆ ಗ್ರಾಮಗಳ ವ್ಯಾಪ್ತಿಯಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಮಶಾನಕ್ಕೆ ತಾಲ್ಲೂಕು ಆಡಳಿತ ಸ್ಥಳವನ್ನು ಗುರುತಿಸಿ ಕೊಡಬೇಕು ಎಂದು ಸರ್ಕಾರ ಆದೇಶ ಮಾಡಿದ್ದರೂ ಹೆಣ ಹೂಳಲು ಜಾಗ ಸಿಗದ ಪರಿಸ್ಥಿತಿ ಇದೆ. ತಾಲ್ಲೂಕಿನ ಬೇಜವಾಬ್ದಾರಿ ಮತ್ತು ಭ್ರಷ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ದುಸ್ಥಿತಿ ಬಂದಿದೆ. ದುಡ್ಡು ಕೊಟ್ಟರೆ ಸ್ಮಶಾನವನ್ನೇ ಅವರ ಹೆಸರಿಗೆ ಬರೆದುಕೊಡುವ ಅಧಿಕಾರಿಗಳು ತಾಲ್ಲೂಕಿನಲ್ಲಿ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಆರ್ಎಸ್ ಪಕ್ಷದ ಕಾರ್ಯಕರ್ತರು ತಾಲ್ಲೂಕು ಕಚೇರಿ ಆವರಣದಲ್ಲಿ ಕೆಲ ನಿಮಿಷ ಪ್ರತಿಭಟನೆ ನಡೆಸಿ ತಾಲ್ಲೂಕಿನಾದ್ಯಂತ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಕ್ರಮವಹಿಸಬೇಕು ಎಂದು ಶಿರಸ್ತೇದಾರ್ ಉಮೇಶ್ ಅವರಿಗೆ ಮನವಿ ಸಲ್ಲಿಸಿದರು.

ಕೆಆರ್ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಡಿ.ಜಿ.ನಾಗರಾಜ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿರಾಜ್ ಅಹಮದ್, ಕಾರ್ಯದರ್ಶಿಗಳಾದ ಶ್ರೀನಿವಾಸ್, ಗಂಗರಾಜ್, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೀಪಿಕಾ, ರಾಜ್ಯ ಎಸ್ಸಿಎಸ್ಟಿ ಘಟಕದ ಕಾರ್ಯದರ್ಶಿ ಅನುಸ್ವಾಮಿ, ಕಾರ್ಯಕರ್ತರಾದ ಸಿದ್ಧಲಿಂಗಯ್ಯ, ಬೆಳ್ಳೂರು ಇಲಿಯಾನ್, ಹದ್ದಿಹಳ್ಳಿ ಸಂದೀಪ್, ತಿರುಗನಹಳ್ಳಿ ಶ್ರೀಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.