ನಾಗಮಂಗಲ: ‘ಆರೋಗ್ಯವನ್ನೂ ಲೆಕ್ಕಿಸದೆ ಹಗಲಿರುಳು ಶ್ರಮಿಸಿ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಮುಂಬರುವ ಚುನಾವಣೆಗಳಲ್ಲಿ ನನ್ನ ಕಣ್ಣಲ್ಲಿ ನೀರು ಹಾಕಿಸಬೇಡಿ’ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ₹ 9 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಕ್ಷ ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಇದೇ ವೇಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಕ್ಷೇತ್ರದ ಜನರ ಋಣ ತೀರಿಸುವ ಸಲುವಾಗಿ ನನ್ನ ಆರೋಗ್ಯವನ್ನೂ ಲೆಕ್ಕಿಸದೆ ತಾಲ್ಲೂಕು ಮತ್ತು ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದೇನೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಈವರೆಗೆ ಜಿಲ್ಲೆಯ ಪ್ರತಿ ಕುಟುಂಬಕ್ಕೆ 58 ಸಾವಿರ ಹಣ ತಲುಪಿದೆ. 5 ಗ್ಯಾರಂಟಿ ಯೋಜನೆಗಳ ಜೊತೆಗೆ ತಾಲ್ಲೂಕಿನಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿವೆ ಎಂದರು.

ಈ ಹಿಂದೆ ಕ್ಷೇತ್ರದಲ್ಲಿ ಶಾಸಕರಾಗಿದ್ದ ಯಾರಾದರೂ ಒಂದು ಅವಧಿಯಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೆ ನಾನು ಈಗಲೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ದೇವಲಾಪುರ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವಂತೆ ವಿಧಾನಸಭಾ ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲಿಯೂ ನಡೆಯುತ್ತಿವೆ. ಇಷ್ಟೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಕೂಡ ಚುನಾವಣೆ ಸಂದರ್ಭದಲ್ಲಿ ಜನರು ನನ್ನನ್ನು ಪರೀಕ್ಷೆ ಮಾಡುವುದನ್ನು ನೋಡಿದರೆ ಏನು ಹೇಳಬೇಕೆಂದು ಗೊತ್ತಾಗುವುದಿಲ್ಲ ಎಂದರು.

ಕಳೆದ ಮೂರು ವರ್ಷದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವಲಾಪುರ ಹೋಬಳಿಯಲ್ಲಿ ಅತಿಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ. ಕಳೆದ ಮೂರು ವರ್ಷದಲ್ಲಿ ದೇವಲಾಪುರ ಹೋಬಳಿಯ ಮೈಲಾರಪಟ್ಟಣ, ರಾಮೇನಹಳ್ಳಿ, ಹರದನಹಳ್ಳಿ, ಅರಕೆರೆ, ನಾಗನಹಳ್ಳಿ, ಅಂಚೀಪುರ, ತೊರೆಮಲ್ಲನಾಯ್ಕನಹಳ್ಳಿ, ದೊಡ್ಡಹುಪ್ಪಳ, ಕೋಟೆಬೆಟ್ಟ ಸೇರಿದಂತೆ ವಿವಿಧ ಗ್ರಾಮಗಳ ಸೇತುವೆ, ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ₹150 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿಸಲಾಗಿದೆ ಎಂದರು.

ತಹಶೀಲ್ದಾರ್ ಜಿ.ಆದರ್ಶ, ತಾ.ಪಂ ಇಒ ಸತೀಶ್, ಸಿಪಿಐ ಹೇಮಂತ್ಕುಮಾರ್, ಲೋಕೋಪಯೋಗಿ ಇಲಾಖೆಯ ಎಇಇ ಲಿಂಗರಾಜು, ಎಇಇಗಳಾದ ಯದುಕೃಷ್ಣ, ವಿನೋದ್, ಎಇ ಗಳಾದ ಬಿಂದು, ಸುರೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಂ.ಪ್ರಕಾಶ್, ನಿರ್ದೇಶಕ ಎನ್.ಟಿ.ಕೃಷ್ಣಮೂರ್ತಿ, ಚಲನಚಿತ್ರ ನಿರ್ಮಾಪಕ ಮಾವಿನಕೆರೆ ಸುರೇಶ್ ಸೇರಿದಂತೆ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-40-696500239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.