ನಾಗಮಂಗಲ: ಗ್ರಾಮೀಣ ಪ್ರದೇಶದ ರೈತರಿಗೆ ರೈತ ಸಂಪರ್ಕ ಕೇಂದ್ರಗಳು ಕಲ್ಪವೃಕ್ಷವಿದ್ದಂತೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬೆಳ್ಳೂರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ರೈತ ಸಂಪರ್ಕ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಮೂಲಕ ದೊರಕುವ ಸರ್ಕಾರದ ಸೌಲಭ್ಯ ಹಾಗೂ ಯಾವುದೇ ಬೆಳೆ ಬೆಳೆಯಲು ಸಲಹೆ ಮಾರ್ಗದರ್ಶನಗಳನ್ನು ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದುಕೊಳ್ಳಬಹುದು. ಸ್ವಾತಂತ್ರ್ಯ ನಂತರ ಇಡೀ ರಾಜ್ಯದಲ್ಲಿ ಕೇವಲ ಬೆರಳೆಣಿಕೆಯಷ್ಟು ರೈತ ಸಂಪರ್ಕ ಕೇಂದ್ರಗಳಿದ್ದವು. ಕಳೆದ ಮೂರು ವರ್ಷದಲ್ಲಿ 200 ಕ್ಕೂ ಹೆಚ್ಚು ರೈತ ಸಂಪರ್ಕ ಕೇಂದ್ರ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದರು.

‘ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದ ಅವಧಿಯಲ್ಲಿ ಇಡೀ ರಾಜ್ಯಕ್ಕೆ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೊಟ್ಟು ನಮ್ಮ ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ 15 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿತ್ತು. ಜಿಲ್ಲೆಯಲ್ಲಿ ಸ್ವಂತ ನಿವೇಶನ ಹೊಂದಿರುವ ಎಲ್ಲ ಹೋಬಳಿ ಕೇಂದ್ರಗಳಿಗೂ ಆದ್ಯತೆ ಮೇರೆಗೆ ರೈತ ಸಂಪರ್ಕ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿರುವ 8 ರೈತ ಸಂಪರ್ಕ ಕೇಂದ್ರಗಳು ಉದ್ಘಾಟನೆಗೆ ಸಿದ್ಧವಾಗಿವೆ’ ಎಂದರು.

ಬೆಳ್ಳೂರು ಹೋಬಳಿಯ ಜನರು ರಾಜಕೀಯವಾಗಿ ಪ್ರತಿ ಹಂತದಲ್ಲಿಯೂ ನನಗೆ ಹೆಚ್ಚು ಶಕ್ತಿ ನೀಡಿದ್ದಾರೆ. ಹಾಗಾಗಿ ಈ ಹೋಬಳಿಯ ಸರ್ವತೋಮುಖ ಅಭಿವೃದ್ಧಿಗೆ ಕಳೆದ ಮೂರು ವರ್ಷದಲ್ಲಿ ₹1 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ₹30 ಕೋಟಿ ವೆಚ್ಚದಲ್ಲಿ ಬೆಳ್ಳೂರು ಪಟ್ಟಣದ ಕುಡಿಯುವ ನೀರಿನ ಯೋಜನೆ, ದಾಸನಕೆರೆ ಅಭಿವೃದ್ಧಿಗೆ ₹25 ಕೋಟಿ, ನೀರಾವರಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ ₹6 ಕೋಟಿ ಸೇರಿ ₹24 ಕೋಟಿಗೂ ಅಧಿಕ ವೆಚ್ಚದಲ್ಲಿ ಒಳಚರಂಡಿ, ಹಾಸ್ಟೆಲ್, ಅಂಬೇಡ್ಕರ್ ಭವನ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಹಾಸ್ಟೆಲ್, ಪೌರಕಾರ್ಮಿಕರ ವಸತಿ ಗೃಹ, ಪಟ್ಟಣ ಪಂಚಾಯಿತಿ ಕಟ್ಟಡ ಮತ್ತು ಶಾದಿಮಹಲ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇಷ್ಟೊಂದು ದೊಡ್ಡ ಪ್ರಮಾಣದ ಅಭಿವೃದ್ಧಿ ಕೆಲಸಗಳ ಜೊತೆಗೆ 5 ಗ್ಯಾರಂಟಿ ಯೋಜನೆಯಿಂದ ಈವರೆಗೆ ಪ್ರತಿ ಕುಟುಂಬಕ್ಕೆ ಸುಮಾರು ₹1ಲಕ್ಷ ಹಣ ತಲುಪಿದೆ. ಇಂತಹ ಜನಪರ ಯೋಜನೆಯನ್ನು ನಾವೂ ಕೊಟ್ಟಿದ್ದೇವೆಂದು ಅದ್ಯಾವ ಪುಣ್ಯಾತ್ಮರು ನನ್ನ ಮುಂದೆ ಬಂದು ಹೇಳುತ್ತಾರೋ ಅವರಿಗೆ ಎಲ್ಲರ ಎದುರು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸವಾಲು ಹಾಕಿದರು.

2018ರ ಚುನಾವಣೆಯಲ್ಲಿ ನಾನು ಸೋತು 5 ವರ್ಷದವರೆಗೆ ಬೆಳ್ಳೂರು ಕ್ರಾಸ್ನಿಂದ ಹೊಸಮನೆ ಗೇಟ್ವರೆಗೆ ಗುಂಡಿಬಿದ್ದಿದ್ದ ರಸ್ತೆಗೆ ಡಾಂಬರ್ ಹಾಕಿರಲಿಲ್ಲವೆಂದರೆ ನನ್ನ ವಿರುದ್ಧ ಮಾತನಾಡುವವರಿಗೆ ನಾಚಿಕೆಯಾಗಬೇಕು. ಈಗ ನಾನು ಆ ರಸ್ತೆ ಅಭಿವೃದ್ಧಿಗೆ ₹2 ಕೋಟಿ ಮಂಜೂರು ಮಾಡಿಸಿದ್ದೇನೆ. ಬೆಳ್ಳೂರು ಕ್ರಾಸ್ ಮೂಲಕ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾಯ್ದು ಹೋಗಿದ್ದು, ಸಾರ್ವಜನಿಕರಿಗೆ ಮೂಲ ಸೌಕರ್ಯ ಕಲ್ಪಿಸಲು ₹ 4 ಕೋಟಿ ಮಂಜೂರು ಮಾಡಿಸಲಾಗಿದೆ ಎಂದರು.

ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಜಿ.ಆದರ್ಶ, ತಾ.ಪಂ. ಇಒ ಸತೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಪಾಂಡವಪುರ ಉಪ ವಿಭಾಗದ ಉಪ ಕೃಷಿ ನಿರ್ದೇಶಕ ಡಾ.ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೆಆರ್ಐಡಿಎಲ್ನ ಇಇ ಸೋಮಶೇಖರ್, ಎಇಇ ಚೈತ್ರ, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಕನ್ನಾಘಟ್ಟ ವೆಂಕಟೇಶ್, ಕೆ.ವಿ.ದಿನೇಶ್, ರಂಗೇಗೌಡ, ಪಾಪಣ್ಣ, ಶಿವಣ್ಣ, ಯಾಸೀನ್, ಯಶೋಧಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-40-188103971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.