ನಾಗಮಂಗಲ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್‌ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.
ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.